ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 APRIL 2024
SAGARA : ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆ.ಜಿ ತೂಕದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರ ತೆಗೆಯಲಾಗಿದೆ. ಹೊಸನಗರ ತಾಲೂಕು ಜಯನಗರ ನಿವಾಸಿ ಶಶಿಕಲಾ ಎಂಬುವವರಿಗೆ ಸಾಗರದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರು 2 ಗಂಟೆ ಶಸ್ತ್ರಚಿಕಿತ್ಸೆ ನಡೆಸಿದರು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಶಶಿಕಲಾ ಅವರು ಕೆಲವು ಸಮಯ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಪರೀಕ್ಷಿಸಿದಾಗ ಹೊಟ್ಟೆಯಲ್ಲಿ ಗೆಡ್ಡೆ ಬೆಳೆದಿರುವುದು ಗೊತ್ತಾಗಿದೆ. ವೈದ್ಯರಾದ ನಾಗೇಂದ್ರಪ್ಪ, ಪ್ರತಿಮಾ, ಶರ್ಮಿತಾ, ಬಿ.ಜಿ.ಸಂಗಮ್, ರಾಜೇಶ್, ಶುಶ್ರೂಷಕಿಯರಾದ ಸುವರ್ಣ, ಶ್ವೇತಾ, ಆಲಿಯಾ, ಚಂದ್ರು, ರಾಕೇಶ್ ಅವರನ್ನೊಳಗೊಂಡ ತಂಡ ಶಸ್ತ್ರ ಚಿಕಿತ್ಸೆ ನಡೆಸಿ ಗೆಡ್ಡೆಯನ್ನು ಹೊರತೆಗೆದಿದ್ದಾರೆ. ಸದ್ಯ ಮಹಿಳೆ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದೆ.
ಇದನ್ನೂ ಓದಿ – ಪುರಲೆಯಿಂದ ಫೋನ್ ಕಾಲ್, ಹೊನ್ನಾಳಿಗೆ ತೆರಳಿದ್ದ ಕುಟುಂಬಕ್ಕೆ ಕಾದಿತ್ತು ಶಾಕ್, ಕೂಡಲೆ ಶಿವಮೊಗ್ಗಕ್ಕೆ ದೌಡು
ಶಿವಮೊಗ್ಗ ಲೈವ್.ಕಾಂ