ಆಯನೂರು ಸರ್ಕಲ್‌ನಲ್ಲಿ ಬೈಕ್‌ಗೆ ಜೀಪ್ ಡಿಕ್ಕಿ, ನವುಲೆ ಯುವಕ ಸಾವು

ಶಿವಮೊಗ್ಗ ಲೈವ್.ಕಾಂ | AYANUR NEWS | 24 ಸೆಪ್ಟಂಬರ್ 2020

ಆಯನೂರು ಸರ್ಕಲ್‍ನಲ್ಲಿ ಡಿಯೋ ಬೈಕ್‍ಗೆ ಜೀಪ್‍ ಡಿಕ್ಕಿ ಹೊಡೆದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವುಲೆಯ ರವಿಕುಮಾರ್ (20) ಮೃತ ಯುವಕ. ಸ್ನೇಹಿತನೊಬ್ಬನ ಮನೆಗೆ ಹೋಗಿ ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಆಯನೂರು ಸರ್ಕಲ್‍ ಬಳಿ ಎದುರಿನಿಂದ ವೇಗವಾಗಿ ಬಂದ ಜೀಪ್‍ ರವಿಕುಮಾರ್ ಬೈಕ್‍ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ತಲೆ ಮತ್ತು ಎದೆ ಭಾಗಕ್ಕೆ ಗಂಭಿರ ಗಾಯವಾಗಿತ್ತು. ರವಿಕುಮಾರ್‍ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ರವಿಕುಮಾರ್ ಕೊನೆಯುಸಿರೆಳೆದಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!
Open chat