ಕೇಂದ್ರ, ರಾಜ್ಯ ಸರ್ಕಾರದ ದುರಾಡಳಿತಕ್ಕೆ ಕಾಂಗ್ರೆಸ್ ಆಕ್ರೋಶ, ಶಿವಮೊಗ್ಗದಿಂದ ರಾಷ್ಟ್ರಪತಿಗೆ ಮನವಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020

ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ, ಕಾರ್ಮಿಕ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಿ ಶಿವಮೊಗ್ಗ ಕಾಂಗ್ರೆಸ್ ಮುಖಂಡರು ಇವತ್ತು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸಿಗರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರಪತಿಗೆ ಮನವಿ

ಪ್ರತಿಭಟನೆ ನಡೆಸಿದ ಕಾಂಗ್ರೆಸಿಗರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ರಾಮನಾಥ ಕೋವಂದ್ ಅವರಿಗೆ ಮನವಿ ಸಲ್ಲಿಸಿದರು.

ರೇಪ್, ಮರ್ಡರ್‍ಗೆ ಆಕ್ರೋಶ

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‍.ಎಸ್.ಸುಂದರೇಶ್, ಬಿಜೆಪಿ ದುರಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಉತ್ತರ ಪ್ರದೇಶದಲ್ಲಿ 19 ವರ್ಷದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ನಡೆ ಖಂಡಿಸಿದರು. ಅಂತ್ಯಸಂಸ್ಕಾರ ನೆರವೇರಿಸಲು ಕುಟುಂಬಕ್ಕೆ ಅವಕಾಶ ಕಲ್ಪಿಸದೆ ಇರುವುದಕ್ಕೆ ಆಕ್ರೋಶಗೊಂಡರು.

ರಾವಣನ ರಾಜ್ಯಕ್ಕಿಂತಲೂ ಕಡೆ

ಮಾಜಿ ಶಾಸಕ ಪ್ರಸನ್ನ ಕುಮಾರ್ ಮಾತನಾಡಿ, ಅಧಿಕಾರಕ್ಕೆ ಬರುವ ಮೊದಲು ಬಿಜೆಪಿಯವರು ರಾಮ ರಾಜ್ಯ ಸೃಷ್ಟಿಸುವುದಾಗಿ ಭರವಸೆ ಕೊಟ್ಟಿದ್ದರು. ಈಗ ರಾವಣನ ರಾಜ್ಯಕ್ಕಿಂತಲೂ ಕಡೆಯಾಗಿದೆ ದೇಶ ಮತ್ತು ರಾಜ್ಯದ ಸ್ಥಿತಿ. ಇದಕ್ಕೆ ಬಿಜೆಪಿಯೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!
Open chat