ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ, ಶಿವಮೊಗ್ಗದಲ್ಲಿ ಕಾಂಗ್ರಸ್ ಕಾರ್ಯಕರ್ತರ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಇವತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸಿಬಿಐ ದಾಳಿಯನ್ನು ರಾಜಕೀಯ ಪ್ರೇರಿತ ಅಂತಾ ಆರೋಪಿಸಿದರು.

VIDEO REPORT

ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಬಿಜೆಪಿ ನಾಯಕರೆಲ್ಲ ಬಿಪಿಎಲ್ ಕಾರ್ಡ್‍ ಹೊಂದಿದ್ದಾರೆ. ಎಲ್ಲರೂ ಆಶ್ರಯ ಮನೆಯಲ್ಲಿ ವಾಸಿಸುತ್ತಿದ್ದಾರೆ. ಹಾಗಾಗಿ ಅವರಾರ ಮನೆ ಮೇಲೂ ದಾಳಿಯಾಗುತ್ತಿಲ್ಲ ಎಂದು ಲೇವಡಿ ಮಾಡಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್, ಕಾರ್ಪೊರೇಟರ್ ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!
Open chat