ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ, ರಾಜಕೀಯ ಸಂಚಿಗೆ ಕಾಂಗ್ರೆಸ್ ಕಾರ್ಪೊರೇಟರ್ಗಳ ಆಕ್ರೋಶ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಹಾಗೂ ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಮಹಾನಗರಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೀಶ್ ಮತ್ತು ಪಾಲಿಕೆಯ ಕಾಂಗ್ರೆಸ್ ಸದಸ್ಯರು ಖಂಡಿಸಿದ್ದಾರೆ.

ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಸೋಲಿನ ಭೀತಿಯಲ್ಲಿರುವ ಬಿಜೆಪಿ ಈ ಮೂಲಕ ರಾಜಕೀಯ ಸಂಚು ನಡೆಸುತ್ತಿರುವುದು ಖಂಡನೀಯ. ಬಿಜೆಪಿ ನಾಯಕರು ಭ್ರಮೆಯಲ್ಲಿದ್ದಾರೆ ಮತ್ತು ಭಯದಲ್ಲಿದ್ದಾರೆ. ಇಲ್ಲದಿದ್ದರೆ ಚುನಾವಣಾ ಸಮಯ ದಲ್ಲಿಯೇ ಕಾಂಗ್ರೆಸ್ ನಾಯಕರ ಮನೆ ಮೇಲೆ ಸಿಬಿಐ ದಾಳಿ ನಡೆಸುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಕಾಂಗ್ರೆಸ್ ಕಾರ್ಪೊರೇಟರ್‍ಗಳು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಪಾಲಿಕೆ ಸದಸ್ಯರಾದ ಆರ್.ಸಿ.ನಾಯ್ಕ, ಯಮುನಾ ರಂಗೇಗೌಡ, ರಮೇಶ್ ಹೆಗ್ಡೆ, ಶಾಮೀರ್ ಖಾನ್, ರೇಖಾ ರಂಗನಾಥ್, ಮಂಜುಳಾ ಶಿವಣ್ಣ, ಮೆಹಕ್ ಷರೀಫ್ ಅವರು ಸಹಿ ಮಾಡಿ, ಸಿಬಿಐ ದಾಳಿಯನ್ನು ಖಂಡಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!
Open chat