ಅಪ್ಪಾಜಿಗೌಡ ಸ್ಮರಣಾರ್ಥ ಸ್ವಂತ ಖರ್ಚಿನಲ್ಲಿ ಬಸ್ ನಿಲ್ದಾಣ ನಿರ್ಮಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಅಕ್ಟೋಬರ್ 2020 ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಮಾಜಿ ಶಾಸಕ ಅಪ್ಪಾಜಿಗೌಡ ಅವರ ಸ್ಮರಣಾರ್ಥ ಭದ್ರಾವತಿಯ ಕೂಡ್ಲಿಗೆರೆ ಸರ್ಕಲ್‍ನಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್ ಅವರು ತಮ್ಮ ವೈಯಕ್ತಿಕ ಖರ್ಚಿನಲ್ಲಿ ನಿರ್ಮಿಸಿರುವ ಬಸ್ ನಿಲ್ದಾಣವನ್ನು, ಇವತ್ತು ಲೋಕಾರ್ಪಣೆ ಮಾಡಲಾಯಿತು.

ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅಪ್ಪಾಜಿಗೌಡ ಅವರು ಬಸ್ ನಿಲ್ದಾಣಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಅಪ್ಪಾಜಿಗೌಡ ಅವರ ಋಣ ತೀರಿಸಬೇಕು ಅಂತಾ ಈ ಭಾಗದ ಜನರು ಇಷ್ಟೊಂದು ಪ್ರೀತಿ ತೋರಿಸುತ್ತಿದ್ದಾರೆ. ಅದಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್ ಮಾತನಾಡಿ, ಅಪ್ಪಾಜಿಗೌಡ ಅವರು ನಮ್ಮನ್ನು ಬೆಳೆಸಿ, ಪೋಷಿಸಿ, ಅಗಲಿ ಒಂದು ತಿಂಗಳು ಹನ್ನೊಂದು ದಿನವಾಗಿದೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಅವರ ಹೆಸರಿನಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ ಎಂದರು.

ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್, ಶಿಮುಲ್ ಅಧ್ಯಕ್ಷ ಆನಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment