ಕುವೆಂಪು ರಸ್ತೆಯಲ್ಲಿ ವಿದ್ಯುತ್ ಶಾಕ್ ಒಳಗಾಗಿದ್ದ ಲೈನ್ಮನ್ ಸಾವು

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2020

ಕುವೆಂಪು ರಸ್ತೆಯಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶದಿಂದ ತೀವ್ರ ಗಾಯಗೊಂಡಿದ್ದ ಲೈನ್‍ಮನ್ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವಿದ್ಯಾನಗರದ ಉಮಾಶಂಕರ್ (42) ಮೃತರು. ಅಕ್ಟೋಬರ್ 8ರಂದು ಸಂಜೆ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿರುವ 11 ಕೆ.ವಿ. ವಿದ್ಯುತ್ ಲೈನ್ ರಿಪೇರಿ ಮಾಡುತ್ತಿದ್ದರು. ಈ ವೇಳೆ ವಿದ್ಯತ್ ಶಾಕ್‍ನಿಂದಾಗಿ ಕಂಬದ ಮೇಲೆಯೆ ಸಿಕ್ಕಿಬಿದ್ದಿದ್ದರು.

ಅಗ್ನಿಶಾಮಕ ಸಿಬ್ಬಂದಿ ಉಮಾಶಂಕರ್ ಅವರನ್ನು ಕಂಬದ ಮೇಲಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಉಮಾಶಂಕರ್ ಅವರು ಬುಧವಾರ ಮೃತಪಟ್ಟಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!
Open chat