ಶಿವಮೊಗ್ಗ ಜಿಲ್ಲೆಯ 190 ಕಿ.ಮೀ ರಸ್ತೆ ಅಭಿವೃದ್ಧಿ, ಸೊರಬದ ರಸ್ತೆಗಳಿಗೆ 23 ಕೋಟಿ

ಶಿವಮೊಗ್ಗ ಲೈವ್.ಕಾಂ | SORABA NEWS | 17 ಅಕ್ಟೋಬರ್ 2020

ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 190 ಕಿ.ಮೀ ರಸ್ತೆ ಅಭಿವೃದ್ಧಿಗೆ ಯೋಜಿಸಲಾಗಿದೆ. ಈ ಪೈಕಿ ಸೊರಬ ತಾಲೂಕಿನಲ್ಲಿ 23.48 ಕೋಟಿ ರೂ ವೆಚ್ಚದಲ್ಲಿ 31 ಕಿ.ಮೀ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಸೊರಬ ತಾಲೂಕಿನ ಕವಡಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕೆಆರ್‍ಆರ್‍ಡಿಎ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ 3ನೇ ಹಂತದ ಸುಮಾರು 4.75 ಕೋಟಿ ರೂ. ವೆಚ್ಚದಲ್ಲಿ ಮಳಲಿಕೊಪ್ಪದಿಂದ ಕವಡಿ ಮಾರ್ಗವಾಗಿ ರಾಜ್ಯ ಹೆದ್ದಾರಿ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಸದ ರಾಘವೇಂದ್ರ ಶಂಕುಸ್ಥಾಪನೆ ನೆರವೇರಿಸಿದರು.

ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ರಸ್ತೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಅದರಂತೆ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದು ರಾಘವೇಂದ್ರ ಹೇಳಿದರು.

ಬಳಿಕ ಬೆನ್ನೂರು ಗ್ರಾಮದಲ್ಲಿ 3.51 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತು ಎಣ್ಣೆಗೊಪ್ಪ ಗ್ರಾಮದಲ್ಲಿ 6.95 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಸದರ ರಾಘವೇಂದ್ರ ಶಂಕುಸ್ಥಾಪನೆ ನೆರವೇರಿಸಿದರು.

ಶಾಸಕ ಕುಮಾರ್ ಬಂಗಾರಪ್ಪ, ತಾಲೂಕ ಪಂಚಾಯಿತಿ ಅಧ್ಯಕ್ಷೆ ನಯನಾ ಶ್ರೀಪಾದ ಹೆಗಡೆ, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಎ.ಎಲ್.ಅರವಿಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿರಂಜನ ಕುಪ್ಪಗುಡ್ಡೆ, ಶ್ರೀಪಾದ ಹೆಗಡೆ ನಿಸರಾಣಿ, ಭೋಗೇಶ್ ಶಿಗ್ಗಾ, ದೇವೇಂದ್ರಪ್ಪ ಚನ್ನಾಪುರ ಸೇರಿದಂತೆ ಹಲವರು ಇದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!
Open chat