ಕಲ್ಲೊಡ್ಡು ಯೋಜನೆಗೆ ಸಿಕ್ತು ಚಾಲನೆ, ಶಿಕಾರಿಪುರದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ಎರಡು ವರ್ಷದ ಡೆಡ್ ಲೈನ್

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 19 ಅಕ್ಟೋಬರ್ 2020

ಕರೋನ, ಅತಿವೃಷ್ಟಿಯ ನಡುವೆಯು ರಾಜದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ನೋಡಿಕೊಳ್ಳಲಾಗಿದೆ. ಶಿಕಾರಿಪುರದಲ್ಲೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಎರಡು ವರ್ಷದಲ್ಲಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶಿಕಾರಿಪುರ ತಾಲೂಕಿನಲ್ಲಿ 200 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, 6 ಕೋಟಿ ರೂ. ವೆಚ್ಚದ ಹಲವು ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಯಡಿಯೂರಪ್ಪ ಅವರು ಮಾತನಾಡಿ, ಶಿಕಾರಿಪುರದಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳು ಎರಡು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದರು.

ಕಲ್ಲೊಡ್ಡು ಏತ ನೀರಾವರಿ ಯೋಜನೆ ಮೂಲಕ 230 ಕರೆಗಳನ್ನು ಭರ್ತಿ ಮಾಡಲಾಗುವುದು. ಇದರಿಂದ ಶಿಕಾರಿಪುರ ಮತ್ತು ಸೊರಬ ತಾಲೂಕಿನ 3,420 ಹೆಕ್ಟೇರ್ ಕೃಷಿ ಜಮೀನಿಗೆ ಅನುಕೂಲ ಆಗಲಿದೆ ಎಂದರು.

ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಪುಣ್ಯಕ್ಷೇತ್ರ ಮತ್ತು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಕಾಮಗಾರಿಗಳು ಈಗಷ್ಟೇ ಆರಂಭವಾಗಿದ್ದು, ಆರು ತಿಂಗಳು ಸಭೆಗಳನ್ನು ನಡೆಸಿ ನೀಲನಕ್ಷೆ ಸಿದ್ಧಪಡಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!