ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2020
ಶಿವಮೊಗ್ಗ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಿಡಿಯೋ ರಿಪೋರ್ಟ್ ಇಲ್ಲಿದೆ
ಜಿಲ್ಲಾ ಪಂಚಾಯಿತಿ ಸಹ್ಯಾದ್ರಿ ಸಭಾಂಗಣದಲ್ಲಿ ಇವತ್ತು ನಡೆದ ನೈಋತ್ಯ ರೈಲ್ವೆ ವಲಯ ಮಹಾಪ್ರಬಂಧಕ ಎ.ಕೆ.ಸಿಂಗ್ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಂಸದ ಬಿ.ವೈ.ರಾಘವೇಂದ್ರ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರೈಲ್ವೆ ಸೇವೆ ಶೀಘ್ರದಲ್ಲಿ ಪುನಾರಂಭವಾಗಲಿದೆ ಎಂದು ತಿಳಿಸಿದರು. ಈ ಕುರಿತು ಅಧಿಕಾರಿಗಳ ಜೊತೆಗೆ ಚರ್ಚಿಸಲಾಗಿದೆ ಎಂದರು.
ಜಿಲ್ಲೆಯ ನಾಲ್ಕು ಕಡೆ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ. ಇನ್ನು 15 ದಿನದಲ್ಲಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಈಗಾಗಲೇ ಆರಂಭವಾಗಿರುವ ರೈಲ್ವೆ ಯೋಜನೆಗಳು, ಇನ್ನಷ್ಟೆ ಆರಂಭವಾಗಬೇಕಿರುವ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸಿ, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ರಾಘವೇಂದ್ರ ಅಧಿಕಾರಿಗಳಿಗೆ ತಿಳಿಸಿದರು.
ಸಾಗರ ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿಶೆಟ್ಟಿ, ಮುಖ್ಯಮಂತ್ರಿಗಳ ರೈಲ್ವೆ ಸಲಹೆಗಾರ ಶ್ರೀಧರಮೂರ್ತಿ, ನೈಋತ್ಯ ರೈಲ್ವೆಯ ವಿಭಾಗೀಯ ಸಹಾಯಕ ಅಭಿಯಂತರ ಟಿ.ಆರ್.ಬಗಾಡೆ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]