ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಅಕ್ಟೋಬರ್ 2020
ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಕ್ಟೋಬರ್ 25 ಮತ್ತು 26 ರಂದು ಶಿವಮೊಗ್ಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅ. 25 ರಂದು ಬೆಳಗ್ಗೆ 09.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆ. 10.50ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11.30ಕ್ಕೆ ಗೋಪಿಶೆಟ್ಟಿಹಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಭವನವನ್ನು ಉದ್ಘಾಟಿಸುವರು.
ಮಧ್ಯಾಹ್ನದ 12ಕ್ಕೆ ಪ್ರೆಸ್ ಟ್ರಸ್ಟ್‍ನಲ್ಲಿ ಪತ್ರಿಕಾ ಭವನದ ಭೂಮಿ ಪೂಜೆ ಕಾರ್ಯಕ್ರಮ, 12.15ಕ್ಕೆ ಸರ್ಕಾರಿ ನೌಕರರ ಭವನದ ಮೀಟಿಂಗ್ ಹಾಲ್ ಉದ್ಘಾಟಿಸುವರು. ಮಧ್ಯಾಹ್ನ 12.30ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಪ್ರೆಸ್ ಟ್ರಸ್ಟ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಹಾಗೂ ಅಂದು ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಅಕ್ಟೋಬರ್ 26ರಂದು ವಿವಿಧ ಸ್ಥಳೀಯ ಕಾರ್ಯಕ್ರಮ ಹಾಗೂ ಬೆಳಗ್ಗೆ 10.00ಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 87ನೇ ಜನ್ಮ ಸ್ಮರಣೆ ಹಾಗೂ ಸೊರಬ ಪಟ್ಟಣದ ಉದ್ಯಾನವನದ ಉದ್ಘಾಟನಾ ಸಮಾರಂಭದಲ್ಲಿ ಆನ್‍ಲೈನ್ ಮೂಲಕ ಪಾಲ್ಗೊಳ್ಳುವರು. ಆ ದಿನ ಬೆಳಗ್ಗೆ 11.00ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]