ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ರಕ್ಷಣೆ, ಕೇಂದ್ರದ ಕಾರ್ಯಕ್ರಮಗಳು ತಲುಪಿಸುವಂತೆ ಮನವಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ಹೆಚ್ಚಿನ ಅನುದಾನವನ್ನು ನೀಡುತ್ತಿವೆ. ಇದನ್ನು ಬಳಸಿಕೊಂಡು ಅಲ್ಪಸಂಖ್ಯಾತರು ತಮ್ಮ ಜೀವನಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು. ಬಿಜೆಪಿಯಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇದೆ ಎಂದು ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಎಸ್.ಎಂ.ರಾಜು ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಎಸ್.ಎಂ.ರಾಜು ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ಹೆಚ್ಚಿನ ಅನುದಾನವನ್ನು ನೀಡುತ್ತಿವೆ. ಇದನ್ನು ಬಳಸಿಕೊಂಡು ಅಲ್ಪಸಂಖ್ಯಾತರು ತಮ್ಮ ಜೀವನಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು ಮತ್ತು ಅಲ್ಪಸಂಖ್ಯಾತರಿಗೆ ಇರುವ ಯೋಜನೆಗಳ ಬಗ್ಗೆ ಮಾಹಿತಿಯನ್ನು ಎಲ್ಲರಿಗೂ ತಲುಪಿಸಬೇಕು. ಪಕ್ಷದ ತತ್ವಸಿದ್ದಾಂತಗಳ ಬಗ್ಗೆ ನಂಬಿಕೆ ಇಟ್ಟುಕೊಂಡು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡಬೇಕು ಎಂದರು.

ಜಿಲ್ಲಾಧ್ಯಕ್ಷ ಮೊಹಮ್ಮದ್ ಶಫೀವುಲ್ಲಾ ಮಾತನಾಡಿ, ಪ್ರಧಾನಿ ಮೋದಿಯವರ ಕಾರ್ಯಕ್ರಮಗಳು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಇವೆ. ವಿಶೇಷವಾಗಿ ತ್ರಿವಳಿ ತಲಾಕ್ ಸೇರಿದಂತೆ ಅನೇಕ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ. ಇದನ್ನು ಅಲ್ಪಸಂಖ್ಯಾತರಿಗೆ ತಿಳಿಸುವ ಮೂಲಕ ಅವರೆಲ್ಲವನ್ನು ಪಕ್ಷಕ್ಕೆ ಕರೆತರಬೇಕು ಎಂದರು.

ಪ್ರಮುಖರಾದ ಶಬ್ಬೀರ್ ಅಹಮ್ಮದ್, ಗಂಗಾಧರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!