ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020
ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿಯೊಬ್ಬ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರದ ಲೋಕೇಶ್ ಬಂಗೇರ (53) ಮೃತ ಕೈದಿ. ಗುರುವಾರ ಕೈದಿ ಲೋಕೇಶ್‍ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೆ ಅವರು ಜೈಲು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆ, ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಬೇಕಾಗುತ್ತದೆ ಎಂದು ಜೈಲು ಆರೋಗ್ಯಾಧಿಕಾರಿ ತಿಳಿಸಿದರು.

ಕೊಠಡಿಯಲ್ಲಿದ್ದ ಮಾಸ್ಕ್ ತೆಗೆದುಕೊಂಡು ಬರುವುದಾಗಿ ಹೊರಟ ಲೋಕೇಶ್ ಬಂಗೇರ ಕುಸಿದು ಬಿದ್ದಿದ್ದಾರೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಮಾರ್ಗ ಮಧ್ಯದಲ್ಲೇ ಲೋಕೇಶ್ ಬಂಗೇರ ಕೊನೆ ಉಸಿರೆಳೆದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.
2019ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಮಂಗಳೂರು ನ್ಯಾಯಾಲಯ ಲೋಕೇಶ್ ಬಂಗಾರಗೆ ಜೀವಾವಧಿ ಶಿಕ್ಷೆ ನೀಡಿತ್ತು.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

About The Editor
ನಿತಿನ್ ಆರ್.ಕೈದೊಟ್ಲು
















