ಶಿವಮೊಗ್ಗ ಲೈವ್.ಕಾಂ | SHIMOGA CITY | 7 ನವೆಂಬರ್ 2020
ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ನೇಮಕ ಮಾಡಿರುವ ಮೇಲುಸ್ತುವಾರಿ ಸಮಿತಿಯನ್ನು ರದ್ದುಗೊಳಿಸಬೇಕು. ಈ ಹಿನ್ನೆಲೆಯಲ್ಲಿ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಜಾತ್ಯತೀತ ಸಭೆ ಕರೆಯಲಾಗಿದೆ ಎಂದು ಆರ್ಯ ಈಡಿಗ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಧರ್, ನವೆಂಬರ್ 9ರಂದು ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಆರ್ಯ ಈಡಿಗ ಸಮುದಾಯ ಭವನದಲ್ಲಿ ಸಭೆ ನಡೆಯಲಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಶಾಸಕ ಮಧು ಬಂಗಾರಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಸೇರಿದಂತೆ ಎಲ್ಲಾ ಜಾತಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಹುಲ್ತಿಕೊಪ್ಪ ಶ್ರೀಧರ್ ತಿಳಿಸಿದರು.
ಸಮಿತಿಯ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200