ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ನೇಮಿಸಿರುವ ಮೇಲುಸ್ತುವಾರಿ ಸಮಿತಿ ಸಂಬಂಧ ಈಡಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಆರ್ಯ ಈಡಿಗರ ಸಂಘ ಒತ್ತಾಯಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೆಲಿಪ್ಯಾಡ್ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದ ನಿಯೋಗ, ಸರ್ಕಾರದ ನಡೆಯನ್ನು ಪ್ರಶ್ನಿಸಿ, ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.
ಸರ್ಕಾರದ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿ ಅವರು ದೇವಸ್ಥಾನದ ಮೇಲುಸ್ತುವಾರಿಗೆ ಸಮಿತಿ ರಚಿಸಿದ್ದಾರೆ. ಇದರಿಂದ ಹಿಂದುಳಿದ ವರ್ಗದವರ ಭಾವನೆಗಳಿಗೆ ಧಕ್ಕೆಯಾಗಿದೆ. ಹಾಗಾಗಿ ಹಿಂದುಳಿದ ವರ್ಗದ ನಾಯಕರಾಗಿರುವ ತಾವು, ಸರ್ಕಾರದ ಮೇಲೆ ಒತ್ತಡ ಹೇರಿ, ಸಮಿತಿ ರದ್ದುಗೊಳಿಸಬೇಕು. ಧರ್ಮದರ್ಶಿ ರಾಮಪ್ಪ ಅವರೆ ದೇವಸ್ಥಾನವನ್ನು ಮುನ್ನಡೆಸುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]