ಸಾಗರದಲ್ಲಿ ಕಾರು, ಬೈಕ್ ಡಿಕ್ಕಿ, ಸ್ಥಳದಲ್ಲೇ ಯುವತಿ ಸಾವು

ಶಿವಮೊಗ್ಗ ಲೈವ್.ಕಾಂ | SAGARA NEWS | 19 ನವೆಂಬರ್ 2020

ಕಾರು, ಬೈಕ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ.ಸಾಗರ ತಾಲೂಕಿನ ಶಿರೂರು ಆಲಳ್ಳಿ ಬಳಿ ಘಟನೆ ಸಂಭವಿಸಿದೆ.

ಮೃತ ಯುವತಿಯನ್ನು ಉಷಾ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಉಷಾ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

error: Content is protected !!