ಬಸವನಗುಡಿ, ಅಮೀರ್ ಅಹಮದ್ ಕಾಲೋನಿ ನಿವಾಸಿಗಳಿಗೆ ಪರಿಚಯ ಪತ್ರ ವಿತರಣೆ

ಶಿವಮೊಗ್ಗ ಲೈವ್.ಕಾಂ |SHIMOGA NEWS | 21 NOVEMBER 2020

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ಬಸವನಗುಡಿ, ಅಮೀರ್ ಅಹಮ್ಮದ್ ಕಾಲೋನಿ ನಿವಾಸಿಗಳಿಗೆ ಮನೆ ಪರಿಚಯ ಪತ್ರ ವಿತರಿಸಿದರು.

ಬಳಿಕ ಮಾತನಾಡಿದ ಸಚಿವ ಈಶ್ವರಪ್ಪ, ನಗರದ 23 ಪ್ರದೇಶಗಳಲ್ಲಿ ಪರಿಚಯ ಪತ್ರ ವಿತರಿಸಿದ್ದೇವೆ. ಈ ಪರಿಚಯ ಪತ್ರ ಹೊಂದಿದವರಿಗೆ ಹಕ್ಕುಪತ್ರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ವತಿಯಿಂದ ಇಲ್ಲಿನ ನಿವಾಸಿಗಳಿಗೆ ಮೂಲ ಸೌಲಭ್ಯ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಪರಿಚಯ ಪತ್ರ ಸಿಕ್ಕ ಕೂಡಲೇ ಬ್ಯಾಂಕ್‍ನಲ್ಲಿ ಲೋನ್ ಸಿಗುತ್ತದೆ ಎಂದು ನಿವಾಸಿಗಳು ಭಾವಿಸಿದ್ದಾರೆ. ಅವರಿಗೆ ಹಕ್ಕುಪತ್ರ ಕೊಡುವ ಮೂಲಕ ಋಣ ತೀರಿಸುವ ಕೆಲಸ ಮಾಡಬೇಕು ಎಂದು ಈಶ್ವರಪ್ಪ ಹೇಳಿದರು.

ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ ಮಾತನಾಡಿ, ಕೊಳಚೆ ಪ್ರದೇಶ ಎಂದು ಘೋಷಣೆಯಾಗಿ 10 ವರ್ಷವಾಗಿದೆ. ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಿ ಪರಿಚಯ ಪತ್ರ ನೀಡಲಾಗಿದೆ. ಸಚಿವರ ಸಹಕಾರದಿಂದ ಹಕ್ಕುಪತ್ರ ಕೂಡ ಸಿಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಸದಸ್ಯ ಇ.ವಿಶ್ವಾಸ್ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Reply

error: Content is protected !!