‘ಒಕ್ಕಲಿಗ, ಕುರುಬ, ಕೊಂಕಣಿ, ಕೊಡವ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿ, ನೂರು ಕೋಟಿ ಮೀಸಲಿಡಿ’

ಶಿವಮೊಗ್ಗ ಲೈವ್.ಕಾಂ |SHIMOGA NEWS | 21 NOVEMBER 2020

ಜಾತಿಗೊಂದು ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆ ಅರ್ಥಹೀನ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಲ್ಲೂರು ಮೇಘರಾಜ್, ರಾಜ್ಯ ಸರ್ಕಾರ ಮರಾಠ, ಲಿಂಗಾಯತ – ವೀರಶೈವ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿದೆ. ಇದೆ ರೀತಿ ಇತರೆ ಜಾತಿಗಳ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಹಿಂದುಳಿದ ವರ್ಗಗಳಾದ ಒಕ್ಕಲಿಗ, ಜೈನ, ತಿಗಳರು, ಸಾಧು ಶೆಟ್ಟಿ ಸೇರಿದಂತೆ ವಿವಿಧ ಸಮುದಾಯದ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಬೇಕು. ಪ್ರತಿ ನಿಗಮಕ್ಕೂ ಬಜೆಟ್‍ನಲ್ಲಿ 100 ಕೋಟಿ ರೂ. ಮೀಸಲಿಡಬೇಕು ಎಂದು ಕಲ್ಲೂರು ಮೇಘರಾಜ್ ಆಗ್ರಹಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Reply

error: Content is protected !!