ಕೆರೆಯಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗ ಲೈವ್.ಕಾಂ |SORABA NEWS | 21 NOVEMBER 2020

ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯ ನೆರವಿನಿಂದ ಮೃತದೇಹಗಳನ್ನು ಕೆರೆಯಿಂದ ಹೊರತೆಗೆಯಲಾಗಿದೆ.

ಹೇಗಾಯ್ತು ಘಟನೆ?

ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಚೌಟಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇಬ್ಬರು ಮಕ್ಕಳ ಜೊತೆಗೆ ಬಟ್ಟೆ ಒಗೆಯಲು ತೆರಳಿದ್ದಾಗ ಅವಘಡವಾಗಿದೆ. ವಿದ್ಯಾ (32), ಮಕ್ಕಳಾದ ನಯನಾ (3), ಕನ್ನಿಕಾ (5) ಮೃತ ದುರ್ದೈವಿಗಳು.

ಆಟ ಆಡುತ್ತ ಮಕ್ಕಳು ಕೆರೆಗೆ ಬಿದ್ದಿದ್ದಾರೆ. ಅವರ ರಕ್ಷಣೆಗೆ ಮುಂದಾದ ವಿದ್ಯಾ ಕೂಡ ನೀರುಪಾಲು ಆಗಿರುವ ಶಂಕೆ ಇದೆ. ಮೂವರು ಕೆರೆಯಲ್ಲಿ ಮುಳುಗಿರುವುದು ತಿಳಿಯುತ್ತಿದ್ದಂತೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೂವರ ಮೃತದೇಹಗಳನ್ನು ಕೆರೆಯಿಂದ ಹೊರ ತೆಗೆದಿದ್ದಾರೆ.

ವಿದ್ಯಾ ಅವರ ಪತಿ ಪರಶುರಾಮ್ ಅವರು ಆಟೋ ಚಾಲಕ. ಘಟನೆ ವೇಳೆ ಅವರು ಊರಿನಲ್ಲಿ ಇರಲಿಲ್ಲ ಎಂದು ಹೇಳಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Reply

error: Content is protected !!