BREAKING NEWS |ಶಿವಮೊಗ್ಗ ಸಿಟಿಯಲ್ಲಿ ನಿಷೇಧಾಜ್ಞೆ ಜಾರಿ, ಏನಿರುತ್ತೆ? ಏನಿರಲ್ಲ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ತಕ್ಷಣದಿಂದಲೇ ನಿಷೇಧಾಜ್ಞೆ ಜಾರಿಗೆ ಬಂದಿದೆ. ಶನಿವಾರದವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಗುರುವಾರ ಮಧ್ಯಾಹ್ನ 3 ಗಂಟೆಯಿಂದ  ಡಿಸೆಂಬರ್ 5ರ ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.

ನಿಷೇಧಾಜ್ಞೆಗೆ ಕಾರಣವೇನು?

ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಶಿವಮೊಗ್ಗ ನಗರದ ವಿವಿಧೆಡೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು ಕೋಮಿನ ನಡುವೆ ಗಲಾಟೆಯಾಗಿದ್ದು, ಶಾಂತಿ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಹಶೀಲ್ದಾರ್ ಆದೇಶದಲ್ಲಿ ತಿಳಿಸಿದ್ದಾರೆ.

ನಿಷೇಧಾಜ್ಞೆ ವೇಳೆ ಏನಿರುತ್ತೆ? ಏನಿರಲ್ಲ?

  • ಐದಕ್ಕಿಂತಲೂ ಹೆಚ್ಚು ಜನರು ಒಂದು ಕಡೆ ಗುಂಪುಗೂಡುವಂತಿಲ್ಲ
  • ಮೆರವಣಿಗೆ, ಸಭೆ, ಸಮಾರಂಭ, ಸಮಾವೇಶಗಳನ್ನು ನಡೆಸಲು ಅವಕಾಶವಿಲ್ಲ.
  • ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವುದು, ಶೇಖರಿಸುವುದಕ್ಕೆ ನಿಷೇಧವಿದೆ.
  • ಪಟಾಕಿ ಸೇರಿದಂತೆ ಯಾವುದೆ ಬಗೆಯ ಸ್ಪೋಟಕಗಳನ್ನು ಬಳಸುವುದು ಮತ್ತು ಶೇಖರಿಸುವಂತಿಲ್ಲ.
  • ಯಾವುದೆ ವ್ಯಕ್ತಿಯ ಪ್ರತಿಕೃತಿ ದಹಿಸುವುದು, ಸಂಜ್ಞೆ ಮೂಲಕ, ಸಂಗೀತ, ಚಿತ್ರಗಳು, ಸಂಕೇತಗಳನ್ನು ಪ್ರದರ್ಶನ ಮಾಡುವಂತಿಲ್ಲ.
  • ಖಾಸಗಿ ಅಥವಾ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವಂತಿಲ್ಲ. ಸರ್ಕಾರಿ ಅಧಿಕಾರಿಗಳ ಆಜ್ಞೆ ವಿರೋಧಿಸುವಂತಿಲ್ಲ.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 3, 2020

Leave a Comment