ಶಿವಮೊಗ್ಗ ಲೈವ್.ಕಾಂ |SHIMOGA NEWS | 5 DECEMBER 2020
ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ, ಬಳಿಕ ನಡೆದ ಗಲಭೆಯಿಂದಾಗಿ ನಿಷೇಧಾಜ್ಞೆ ವಿಧಿಸಲಾಗಿದೆ. ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಘಟನೆ ಸಂಬಂಧ ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ?
ಹೊರ ಜಿಲ್ಲೆಯ ಪೊಲೀಸ್
ಶಿವಮೊಗ್ಗ ನಗರದಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿಯಿಂದ ಹೆಚ್ಚುವರಿಯಾಗಿ ಪೊಲೀಸರನ್ನು ಕರೆಯಿಸಲಾಗಿದೆ.
ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶ
ಶಿವಮೊಗ್ಗ ನಗರದಲ್ಲಿ 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. 9 ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಹೊರ ಜಿಲ್ಲೆಯಿಂದ ಬರುವವರ ಮೇಲೆ ನಿಗಾ ವಹಿಸಲಾಗಿದೆ. 22 ಚೀತಾ ಮತ್ತು 19 ಗಸ್ತು ಸಂಚಾರಿ ವಾಹನಗಳು ನಗರದಾದ್ಯಂತ ನಿಗಾ ವಹಿಸಿವೆ.
62 ಕಿಡಿಗೇಡಿಗಳು ವಶಕ್ಕೆ
ಗಲಭೆ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ ಈಗಾಗಲೇ 62 ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಇವರ ವಿಚಾರಣೆ ನಡೆಯುತ್ತಿದೆ. ಇನ್ನು, ಗಲಭೆಯಲ್ಲಿ 19 ಮಂದಿಗೆ ಗಾಯವಾಗಿದ್ದು, ಅವರಿಗೆ ಚಿಕಿತ್ಸೆ ನಡೆಯುತ್ತಿದೆ.
ವಿಶೇಷ ಮ್ಯಾಜಿಸ್ಟ್ರೇಟ್‍ಗಳ ನೇಮಕ
ಗಲಭೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡುತ್ತಿದೆ. 10 ವಿಶೇಷ ಮ್ಯಾಜಿಸ್ಟ್ರೇಟ್‍ಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
‘ಹೊಡೆದವರನ್ನು ಗುರುತಿಸಬಲ್ಲೆ’
ಮತ್ತೊಂದೆಡೆ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೂರ್ವ ವಲಯ ಐಜಿಪಿ ರವಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಶ್ ಅವರನ್ನು ಭೇಟಿಯಾಗಿ, ಮಾಹಿತಿ ಪಡೆದರು. ಈ ವೇಳೆ ಹಲ್ಲೆಕೋರರು ಮಾಸ್ಕ್ ಧರಿಸಿದ್ದರು. ಅವರು ಯಾರೆಂದು ಗೊತ್ತಾಗಲಿಲ್ಲ. ಆದರೆ ತೋರಿಸಿದರೆ ಅವರನ್ನು ಗುರುತಿಸಬಲ್ಲೆ ಎಂದು ತಿಳಿಸಿದ್ದಾರೆ ಎಂದು ಐಜಿಪಿ ರವಿ ಅವರು ತಿಳಿಸಿದ್ದಾರೆ.
ಐಜಿಪಿ ನೇತೃತ್ವದಲ್ಲಿ ಶಾಂತಿ ಸಭೆ
ಶಿವಮೊಗ್ಗದಲ್ಲಿ ಶಾಂತಿ ಕಾಪಾಡುವ ಸಲುವಾಗಿ ಐಜಿಪಿ ರವಿ ಅವರು ಶಾಂತಿ ಸಭೆ ನಡೆಸಿದರು. ವಿವಿಧ ಸಮಾಜದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಂತಿ ನೆಲೆಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಐಜಿಪಿ ಸೂಚಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]