ಶಿವಮೊಗ್ಗದಲ್ಲಿ ಶಾಂತಿ ಸಭೆ, ಮುಂದುವರೆಯುತ್ತಾ ನಿಷೆಧಾಜ್ಞೆ, ಸಭೆಯಲ್ಲಿ ಏನೆಲ್ಲ ಅಭಿಪ್ರಾಯ ವ್ಯಕ್ತವಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 8 DECEMBER 2020

ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಜಿಲ್ಲಾಡಳಿತ ಸಭಾಂಗಣದಲ್ಲಿ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನಪೇಕ್ಷಿತ ಘಟನೆಗಳಿಂದ ಕಳೆದ ಒಂದು ವಾರದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಉಂಟಾಗಿದೆ. ಎಲ್ಲರೂ ಸಾಮರಸ್ಯದಿಂದ ಬಾಳುವ ವಾತಾವರಣ ನಿರ್ಮಿಸುವುದು ಆದ್ಯತೆಯಾಗಿದೆ. ನಗರದ ಉತ್ತಮ ಇಮೇಜ್ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ನಗರದ ಜನತೆಯಲ್ಲಿರುವ ಭಯದ ವಾತಾವರಣವನ್ನು ಹೋಗಲಾಡಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಗಾಂಜಾ ಪ್ರಭಾವದಿಂದ ಅಪರಾಧ

ಅಪ್ರಾಪ್ತೆ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಪ್ಪಿತಸ್ಥರಿಗೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಶಿವಮೊಗ್ಗ ನಗರದಲ್ಲಿ ಗಾಂಜಾ ಪ್ರಭಾವದಿಂದ ಹಲವಾರು ಅಪರಾಧ ಕೃತ್ಯಗಳು ಸಂಭವಿಸುತ್ತಿರುವ ಬಗ್ಗೆ ಹಲವಾರು ಮಂದಿ ಕಳವಳ ವ್ಯಕ್ತಪಡಿಸಿದ್ದು, ಇದನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಔಷಧಿಗಳನ್ನು ಉದ್ದೀಪನವಾಗಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ಫಾರ್ಮಸಿಸ್ಟ್‍ಗಳ ಸಭೆ ಕರೆಯಲಾಗುವುದು. ವೈಯಕ್ತಿಕವಾಗಿ ನಡೆಯುವ ಘಟನೆಗಳನ್ನು ಸಾಮುದಾಯಿಕವಾಗಿ ನೋಡುವುದರಿಂದ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗುತ್ತದೆ. ಇದಕ್ಕೆ ಯಾರೂ ಆಸ್ಪದ ನೀಡಬಾರದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

VIDEO REPORT

 

ಸಿಸಿ ಕ್ಯಾಮರಾ ಅಳವಡಿಸಿ

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಅವರು ಮಾತನಾಡಿ, ಶಿವಮೊಗ್ಗ ನಗರದ ಸಾರ್ವಜನಿಕರ ಸಹಕಾರದಿಂದ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮೊಹಲ್ಲಾ ಸಭೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ದೂರುಗಳಿದ್ದರೂ, ನೇರವಾಗಿ ತಮ್ಮನ್ನು ಕಚೇರಿಯಲ್ಲಿ ಭೇಟಿ ಮಾಡಬಹುದಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ನಾಗರಿಕರು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮನೆಯ ಮುಂದೆ ರಸ್ತೆಗೆ ಅಭಿಮುಖವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಅವರು ಮನವಿ ಮಾಡಿದರು.

ಏನೇನು ಅಭಿಪ್ರಾಯ ಆಗಿದೆ?

ವಿವಿಧ ಸಮುದಾಯಗಳ ಪ್ರತಿನಿಧಿಗಳು ಮಾತನಾಡಿ ಹಲವಾರು ಸಲಹೆಗಳನ್ನು ಸಭೆಯ ಮುಂದಿರಿಸಿದರು.

  • ನಗರದಲ್ಲಿ ಗಾಂಜಾ ಹಾವಳಿ ತೀವ್ರವಾಗಿದ್ದು, ಇದನ್ನು ಕಟ್ಟುನಿಟ್ಟಿನಿಂದ ನಿಯಂತ್ರಿಸಿದರೆ ಮಾತ್ರ ಅಪರಾಧ ಕೃತ್ಯಗಳನ್ನು  ನಿಯಂತ್ರಿಸಲು ಸಾಧ್ಯ.
  • 144 ಸೆಕ್ಷನ್ ಬಗ್ಗೆ ಸರಿಯಾಗಿ ಮಾಹಿತಿ ನೀಡದಿರುವುದರಿಂದ ಜನಸಾಮಾನ್ಯರಿಗೆ, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಬಹಳ ತೊಂದರೆಯಾಗಿದೆ.
  • ಸೆಕ್ಷನ್ ಜಾರಿಯಲ್ಲಿರುವಾಗ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಬೇಕು.

ಉಪ ಮೇಯರ್ ಸುರೇಖಾ ಮುರಳೀಧರ್, ವಿವಿಧ ಸಮಾಜಗಳ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 8, 2020

Leave a Comment