ಶಿವಮೊಗ್ಗದಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯ, ಕೆಲವೆಡೆ 5 ಗಂಟೆ ಬಳಿಕವೂ ಮತದಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020

ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಕೆಲವು ಮತಗಟ್ಟೆಯಲ್ಲಿ ಮತದಾರರು ಸಂಖ್ಯೆ ಹೆಚ್ಚಿದ್ದ ಕಾರಣ, ಅವಧಿ ಬಳಿಕವು ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ ತಾಲೂಕಿನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಿತು. ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ.

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

5 ಗಂಟೆ ಬಳಿಕವೂ ಓಟಿಂಗ್

ಕೆಲವು ಮತಗಟ್ಟೆಗಳಲ್ಲಿ ಸಂಜೆ 5 ಗಂಟೆ ಬಳಿಕವು ಮತದಾನ ನಡೆಯಿತು. ಕೊನೆ ಹಂತದಲ್ಲಿ ಮತದಾರರ ಸಂಖ್ಯೆ ಹೆಚ್ಚಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಯಿತು. ಮತದಾನದ ಅವಧಿ ಮುಗಿಯುವ ಸಮಯಕ್ಕೆ ಮೊದಲು ಮತಗಟ್ಟೆಯೊಳಗೆ ಪ್ರವೇಶಿಸಿದವರಿಗೆ ಮತಾದಾನಕ್ಕೆ ಅವಕಾಶ ನೀಡಲಾಯಿತು.

ಮತ ಎಣಿಕೆ ಕೇಂದ್ರಕ್ಕೆ ಮತಪೆಟ್ಟಿಗೆ

ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಈಗ ಮತಪೆಟ್ಟಿಗೆಗಳನ್ನು ಎಣಿಕೆ ಕೇಂದ್ರಕ್ಕೆ ತರಲಾಗುತ್ತಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment