ಬಿಸಿ ಬಿಸಿ ಪಲಾವ್, ಮೊಸರು ಬಜ್ಜಿ, ರೆಡಿಯಾಗ್ತಿದ್ದಂತೆ ಅಧಿಕಾರಿಗಳ ದಾಳಿ, ಅಡುಗೆ ಮಾಡುತ್ತಿದ್ದವರು ಎಸ್ಕೇಪ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020

ಮತದಾರರಿಗೆ ಹಂಚಲು ಪಲಾವ್ ರೆಡಿ ಮಾಡುತ್ತಿದ್ದ ತೋಟದ  ಮನೆ ಮೇಲೆ ಚುನಾವಣಾ ನೀತಿ ಸಂಹಿತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪದ ಹೊಸಹಳ್ಳಿ‌ ಗ್ರಾಮ‌ ಪಂಚಾಯತಿಯಲ್ಲಿ ಈ ಘಟನೆ ನಡೆದಿದೆ.

ಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ತಮ್ಮನ್ನು ಬೆಂಬಲಿಸಿದ ಮತದಾರರಿಗೆ ಪಲಾವ್ ಹಂಚಲು ರೆಡಿ ಮಾಡಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ‌ ಮೇರೆಗೆ ಚುನಾವಣಾಧಿಕಾರಿಗಳು ದಾಳಿ ನಡೆಸಿದರು.

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಪಲಾವ್ ಮಾಡಲು ಬಳಸಿದ್ದ ಪಾತ್ರೆಗಳು, ರೆಡಿಯಾಗಿದ್ದ ಪಲಾವ್, ಆಹಾರ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಪಲಾವ್ ರೆಡಿ ಮಾಡುತ್ತಿದ್ದವರು ಪರಾರಿಯಾಗಿದ್ದಾರೆ.

200ಕ್ಕೂ ಹೆಚ್ಚು ಜನರಿಗೆ ಪಲಾವ್, ಮೊಸರು ಬಜ್ಜಿ  ರೆಡಿ ಮಾಡಿಸಲಾಗಿತ್ತು. ಊಟ ತಯಾರಿಸಿದ ಅಭ್ಯರ್ಥಿಯ ಯಾರು ಅನ್ನುವುದು ತಿಳಿದು ಬಂದಿಲ್ಲ. ಈ ಸಂಬಂದ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು‌ ಚುನಾವಣಾಧಿಕಾರಿ ಚಂದ್ರಪ್ಪ ತಿಳಿಸಿದ್ದಾರೆ.

VIDEO REPORT

ದಾಳಿಯಲ್ಲಿ ಚುನಾವಣಾಧಿಕಾರಿ ಚಂದ್ರಪ್ಪ, ಇಒ ಡಾ.ಕಲ್ಲಪ್ಪ‌‌ ಸೇರಿದಂತೆ  ಇತರರು ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment