ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 DECEMBER 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಿಗಂದೂರು ದೇವಸ್ಥಾನದ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೇವಿಯ ಶಾಪ ತಟ್ಟಿದೆ. ಸಂಕ್ರಾಂತಿ ಕಳೆಯುತ್ತಿದ್ದಂತೆ ಅವರು ರಾಜೀನಾಮೆ ನೀಡುವಂತಾಗುತ್ತದೆ ಎಂದು ಕಾಂಗ್ರೆಸ್ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಯಡಿಯೂರಪ್ಪ ಅವರಿಗೆ ಸಿಗಂದೂರು ದೇವಿಯ ಶಾಪ ಮತ್ತು ಅವರ ಪಕ್ಷದ ಶಾಸಕರ ಶಾಪ ತಟ್ಟಿದೆ. ಹಾಗಾಗಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗಲಿದೆ ಎಂದರು.
ಹೆಗಲೇರಿದ ಡಿನೋಟಿಫೈ ಹಗರಣ
ಸಿಗಂದೂರು ದೇವಿಯ ಶಾಪದ ಪರಿಣಾಮ ಡಿನೋಟಿಫೈ ಹಗರಣ ಯಡಿಯೂರಪ್ಪ ಅವರ ಬೆನ್ನಿಗೇರಿದೆ. ಇದೇ ರೀತಿಯ ಪ್ರಕರಣದಲ್ಲಿ ಯಡಿಯೂರಪ್ಪ ಅವರು ಜೈಲಿಗೆ ಹೋಗಿದ್ದರು. ಈಗ ಮತ್ತೊಮ್ಮೆ ಅದೇ ರೀತಿಯ ಸ್ಥಿತಿ ಬಂದಿದೆ. ಹಾಗಾಗಿ ಸಂಕ್ರಾಂತಿ ಹಬ್ಬದ ಬಳಿಕ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗುತ್ತದೆ.
ಶಾಸಕರ ಶಾಪವು ತಟ್ಟುತ್ತಿದೆ
ಉತ್ತರ ಕರ್ನಾಟಕದ ಕೆಲವು ಶಾಸಕರ ಶಾಪವು ಯಡಿಯೂರಪ್ಪ ಅವರಿಗೆ ತಟ್ಟುತ್ತಿದೆ. ಅವರು ಪ್ರತ್ಯೇಕ ಪ್ರಾದೇಶಿಕ ಪಕ್ಷ ಸ್ಥಾಪನೆಗೆ ಯೋಚಿಸುತ್ತಿದ್ದಾರೆ. ಹಾಗಾಗಿ ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಳ್ಳುವುದು ನಿಶ್ಚಿತ ಅಂತಾ ಬೇಳೂರು ಗೋಪಾಲಕೃಷ್ಣ ಹೇಳಿದರು.
VIDEO REPORT
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]