‘ಗೋ ಮಾಂಸ ತಿನ್ನೋರಿಗೆ, ಪಾಕ್ ಜಿಂದಾಬಾದ್ ಅನ್ನೋರಿಗೆ ಗ್ರಾಮ ಪಂಚಾಯಿತಿಯಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ’

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 DECEMBER 2020

ಗೋ ಮಾಂಸ ತಿನ್ನುವವರನ್ನು, ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳುವವರನ್ನು, ಹನುಮ ಜಯಂತಿ ದಿನ ಕೋಳಿ ಮಾಂಸ ತಿನ್ನುತ್ತೇನೆ ಎಂದು ಉದ್ದಟತನದಿಂದ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜನರು ತಕ್ಕಪಾಠ ಕಲಿಸಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವುಗಳಿಗೆ ಪೂಜೆ ಮಾಡುವುದು ನಮ್ಮ ಸಂಸ್ಕೃತಿ. ಹನುಮ ಜಯಂತಿ ಮಾಡುತ್ತೇವೆ. ಇಂತಹ ಸಂಸ್ಕೃತಿಗೆ ವಿರುದ್ದವಾಗಿ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಮಾತನಾಡುತ್ತಿದ್ದಾರೆ. ಅವರು ಏನು ಬೇಕಾದರೂ ತಿನ್ನಲಿ ಆದರೆ ಸಾರ್ವಜನಿಕವಾಗಿ ಹನುಮ ಜಯಂತಿ ದಿನ ನಾನು ನಾಟಿ ಕೋಳಿ ತಿನ್ನುತ್ತೇನೆ ನನ್ನನ್ಯಾರು ಕೇಳುತ್ತಾರೆ ಎಂದು ಹೇಳುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ | ಗ್ರಾಮ ಪಂಚಾಯಿತಿ ನೂತನ ಸದಸ್ಯರಿಗೆ ತರಬೇತಿ, ಹೇಗಿರತ್ತೆ? ಏನೆಲ್ಲ ತಿಳಿಸಲಾಗುತ್ತೆ?

ಪಾಕಿಸ್ತಾನ್ ‍ಜಿಂದಾಬಾದ್‍ ಅಂದರೆ ಕೇಸ್

ಎಸ್‍ಡಿಪಿಐ ಸೇರಿದಂತೆ ಕೆಲವು ಮುಸ್ಲಿಂ ಸಂಘಟನೆಗಳು ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿ ರಾಷ್ಟ್ರವಿರೋಧಿ ಚಟುವಟಿಕೆ ನಡೆಸುತ್ತಿವೆ. ಇವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಇಂತಹ ಸಂಘಟನೆಗಳ ನಿಷೇಧಕ್ಕೂ ಕೂಡ ಚಿಂತನೆ ನಡೆಸಲಾಗಿದೆ ಎಂದರು.

ಫಲಿತಾಂಶ ಆತ್ಮಸ್ಥೈರ್ಯ ತುಂಬಿದೆ

ಗ್ರಾ.ಪಂ. ಚುನಾವಣೆಯ ಫಲಿತಾಂಶ ಬಿಜೆಪಿಗೆ ಆತ್ಮಸ್ಥೈರ್ಯ ತಂದಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಈ ಬಾರಿ ವ್ಯವಸ್ಥಿತವಾಗಿ ಚುನಾವಣೆ ನಡೆಸಿ ಶೇ.60ಕ್ಕಿಂತಲೂ ಹೆಚ್ಚು ಗ್ರಾ.ಪಂ. ಸದಸ್ಯರನ್ನು ನಾವು ಹೊಂದಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಗೆ ಇದು ಗಟ್ಟಿಬೇರು ಆಗುತ್ತದೆ ಎಂದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment