ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 31 DECEMBER 2020
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಬಹು ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಬಹುಮತ ಪಡೆಯುವುದರ ಮೂಲಕ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಜಿಲ್ಲೆಯ 224 ಗ್ರಾ.ಪಂ.ಗಳ 2,609 ಸ್ಥಾನಗಳಿಗೆ ನಡೆದ ಗ್ರಾ.ಪಂ.ಚುನಾವಣೆಯಲ್ಲಿ, ರಾಜಕೀಯ ಪಕ್ಷದ ಚಿಹ್ನೆ ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷದಿಂದ ಪ್ರಾತಿನಿಧಿಕವಾಗಿ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದರು.
ಜಿಲ್ಲೆಯ ಸಾಗರ, ಭದ್ರಾವತಿ ಮತ್ತು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಲಭಿಸಿದೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಶೇ.50ರಷ್ಟು, ಮುಖ್ಯಮಂತ್ರಿ ಅವರ ತವರು ಕ್ಷೇತ್ರದಲ್ಲಿ ಶೇ.45ರಷ್ಟು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದರು.
ಸೊರಬ ತಾಲ್ಲೂಕಿನ ಸೊರಬ ಬ್ಲಾಕ್ನಲ್ಲಿ ಶೇ.50ರಷ್ಟು ಸಾಧನೆ ಮಾಡಿ ಆನವಟ್ಟಿ ಬ್ಲಾಕ್ನಲ್ಲಿ ಬಹುಮತ ಗಳಿಸಿಕೊಂಡಿದೆ. ಒಟ್ಟಾರೆ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಮುನ್ನಡೆ ಪಡೆದುಕೊಂಡಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಪಾಲಿಕೆ ವಿಪಕ್ಷ ನಾಯಕ ಹೆಚ್.ಸಿ.ಯೋಗೀಶ್, ಸಿ.ಎಸ್.ಚಂದ್ರಭೂಪಾಲ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200