ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021
ಜಿಲ್ಲಾ ಪಂಚಾಯಿತಿ ವತಿಯಿಂದ ನೀಡಲಾಗಿದ್ದ ಸೂಚನೆಗಳನ್ನು ಪಾಲಿಸದ ಮೂವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಓ) ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ (ಸಿಇಓ) ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾರನ್ನೆಲ್ಲ ಅಮಾನತು ಮಾಡಲಾಗಿದೆ?
ಭದ್ರಾವತಿ ತಾಲೂಕು ಕಾಗೆಕೋಡಮಗ್ಗಿ ಗ್ರಾಮ ಪಂಚಾಯಿತಿ ಪಿಡಿಒ ಡಿ.ಶ್ರೀಧರ್ ನಾಯ್ಕ್.
ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಪ್ರಭಾರ ಅಭವೃದ್ಧಿ ಅಧಿಕಾರಿ ಸತೀಶ್ ಗೌಡ,
ಕಂಬದಾಳ ಹೊಸೂರು ಗ್ರಾಮ ಪಂಚಾಯಿತಿ ಪಿಡಿಒ ಅಹಮ್ಮದ್ ಅಲಿ.
ಅಮಾನತು ಮಾಡಲು ಕಾರಣವೇನು?
ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಅವರ ನೇತೃತ್ವದಲ್ಲಿ, ಮಂಗಳವಾರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ವೇಳೆ, ಮೂವರು ಪಿಡಿಒಗಳನ್ನು ಸೂಚನೆಗಳನ್ನು ಸರಿಯಾಗಿ ಪಾಲಿಸದೆ ಇರುವುದು ತಿಳಿದು ಬಂದಿತ್ತು. ಹಾಗಾಗಿ ಮೂವರನ್ನು ಅಮಾನತು ಮಾಡಿ, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಅವರು ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]