ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನವದೆಹಲಿಯ ಈ ಬಾರಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಶಿವಮೊಗ್ಗ ರಂಗಾಯಣದ ಕಲಾವಿದರು ಪಾಲ್ಗೊಳ್ಳುತ್ತಿದ್ದಾರೆ. ಕರ್ನಾಟಕದ ಸ್ತಬ್ಧಚಿತ್ರದೊಂದಿಗೆ ಈ ಕಲಾವಿದರು ಭಾಗವಹಿಸಲಿದ್ದಾರೆ.
ಖ್ಯಾತ ಕಲಾ ನಿರ್ದೇಶಕ ಶಶಿಧರ ಅಡಪ ಅವರು ವಿನ್ಯಾಸ ಮಾಡಿರುವ ಸ್ತಬ್ಧ ಚಿತ್ರದಲ್ಲಿ ಭಾಗವಹಿಸಲು, ಶಿವಮೊಗ್ಗ ರಂಗಾಯಣದ ಕಲಾವಿದರಾದ ಪ್ರಸನ್ನ ಕುಮಾರ್ ಆರ್, ನಿತಿನ್ ಡಿ.ಆರ್, ರವಿಕುಮಾರ್ ಎಸ್.ಎಮ್., ಸುಜಿತ್ ಕಾರ್ಕಳ, ಚಂದನ್ ಎನ್, ಶರತ್ ಬಾಬು ಎಂ.ಎಲ್., ಮಹಾಬಲೇಶ್ವರ್ ಬಿ.ಕೆ., ಸವಿತಾ ಆರ್ ಕಾಳಿ, ರಮ್ಯಾ ಆರ್., ರಂಜಿತ ಆರ್, ದೀಪ್ತಿ ಎಮ್.ಹೆಚ್., ಕಾರ್ತಿಕ್ ಕಲ್ಲುಕುಟಿಕರ್ ಆಯ್ಕೆಯಾಗಿದ್ದಾರೆ.
ಜನವರಿ 26 ರಂದು ನಡೆಯುವ ಈ ಪೆರೆಡ್ನಲ್ಲಿ ಕಲಾವಿದರಾಗಿ ಭಾಗವಹಿಸಲು ಜನವರಿ 10ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಶಿವಮೊಗ್ಗ ರಂಗಾಯಣದ ನಿರ್ದೇಶಕ ಸಂದೇಶ ಜವಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಂಗಸಮಾಜದ ಸದಸ್ಯ ಹಾಲಸ್ವಾಮಿ, ರಂಗಾಯಣ ಆಡಳಿತಾಧಿಕಾರಿ ಶಫಿ ಸಾದುದ್ದೀನ್ ಉಪಸ್ಥಿತರಿದ್ದರು
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]