ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021
ಮರದ ರೆಂಬೆ ತುಂಡಾಗಿ ಕಾರಿನ ಮೇಲೆ ಬಿದ್ದಿದ್ದು, ಸ್ವಲ್ಪದರಲ್ಲಿ ಅಪಾಯ ತಪ್ಪಿದೆ. ಶಿವಮೊಗ್ಗದ ಜೆಪಿಎನ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ರೆಂಬೆ ತುಂಡಾಗಿ ಬಿದ್ದಿದೆ. ಅದೃಷ್ಟವಶಾತ್ ಯಾವುದೆ ಅಪಾಯವಾಗಿಲ್ಲ. ಕಾರು ನಿಲ್ಲಿಸಿ ಮನೆಯೊಳಗೆ ಹೋಗಿದ್ದ ವೇಳೆ ಘಟನೆಯಾಗಿದೆ.
ಜೆಪಿಎನ್ ರಸ್ತೆಯಲ್ಲಿ ವಾಹನ ಮತ್ತು ಜನ ದಟ್ಟಣೆ ಹೆಚ್ಚು. ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಟ್ರಾಫಿಕ್ ಜಾಮ್ ಕೂಡ ಆಗಿರುತ್ತದೆ. ಆದರೆ ಮರದ ರೆಂಬೆ ತುಂಡಾಗಿ ಬಿದ್ದಾಗ ಅದೃಷ್ಟವಶಾತ್ ಜನ, ವಾಹನ ಸಂಚಾರವಿರಲಿಲ್ಲ.
ಪಾಲಿಕೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರೆಂಬೆ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com





