ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021
ಕ್ಷುಲಕ ಕಾರಣಕ್ಕೆ ಯುವಕರ ನಡುವೆ ನಡೆದ ಗಲಾಟೆ ಮತ್ತು ಯುವಕನೊಬ್ಬನ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಒಂಭತ್ತು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರು ರೌಡಿ ಶೀಟರ್ ಗಳು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ರೌಡಿ ಶೀಟರ್ ಗಳಾದ ಮಹಮದ್ ಸಮೀರ್ ಅಲಿಯಾಸ್ ಅಪ್ಪು, ಆದಿಲ್ ಪಾಷಾ ಎಂಬುವವರನ್ನು ಬಂಧಿಸಲಾಗಿದೆ. ಇವರೊಂದಿಗೆ ಪ್ರತಾಪ್ ಅಲಿಯಾಸ್ ಸಲೀಂ ಅಲಿಯಾಸ್ ಅಣ್ಣಾ, ಸಕ್ಲೈನ್ ಮುಸ್ತಾಕ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಡಿವೈಎಸ್ ಪಿ ಉಮೇಶ್ ಈಶ್ವರ್ ನಾಯಕ್ ಮಾರ್ಗದರ್ಶನದಲ್ಲಿ ದೊಡ್ಡಪೇಟೆ ಠಾಣೆ ಇನ್ಸ್ ಪೆಕ್ಟರ್ ವಸಂತ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಹೇಗಾಯ್ತು ಪ್ರಕರಣ? ಎಸ್‍ಪಿ ಹೇಳಿದ್ದೇನು? ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

- ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

About The Editor
ನಿತಿನ್ ಆರ್.ಕೈದೊಟ್ಲು
















