ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021
ಶಿವಮೊಗ್ಗದಲ್ಲಿ ಇಬ್ಬರು ಯುವಕರ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಇರಿಯಲಾಗಿದೆ. ಓರ್ವ ಯುವಕ ಸ್ಥಳದಲ್ಲೆ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.
ಕೆ.ಆರ್.ಪುರಂ ನಿವಾಸಿ ಜೀವನ್ ಮೃತ ದುರ್ದೈವಿ. ಸೀಗೆಹಟ್ಟಿಯ ಕೇಶವ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೇಗಾಯ್ತು ಘಟನೆ?
ಎನ್.ಟಿ.ರಸ್ತೆಯ ಸುಂದರ ಆಶ್ರಯ ಲಾಡ್ಜ್ ಸಮೀಪ ತಡರಾತ್ರಿ ಘಟನೆ ಸಂಭವಿಸಿದೆ. ಕ್ಷುಲಕ ವಿಚಾರಕ್ಕೆ ಚಾಕು ಇರಿದಿರುವ ಶಂಕೆ ಇದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆಗಾಗಲೆ ಜೀವನ್ ಮೃತಪಟ್ಟಿದ್ದು, ಕೇಶವ್ಗೆ ಚಿಕಿತ್ಸೆ ನೀಡಲಾಗುತ್ತಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ತಂಡ ರಚಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

- ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

- ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

- ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

- ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು
















