ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 02 FEBRUARY 2021
ಭದ್ರಾವತಿ ನಗರದ ಪ್ರಮುಖ ರಸ್ತೆಗಳು ಮತ್ತು ಸರ್ಕಲ್‍ಗಳನ್ನು ಸದ್ಯದಲ್ಲೇ ಅಗಲೀಕರಣ ಮಾಡಲಾಗುತ್ತದೆ ಎಂದು ನಗರಸಭೆ ಆಯುಕ್ತ ಮನೋಹರ್ ಅವರು ತಿಳಿಸಿದ್ದಾರೆ.
ಸರ್.ಎಂ.ವಿ.ಸಭಾಂಗಣದಲ್ಲಿ ಇವತ್ತು ನಗರಸಭೆಯ ಆಯವ್ಯಯದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಆಯುಕ್ತ ಮನೋಹರ್, ಭದ್ರಾವತಿ ಪಟ್ಟಣದ ರಂಗಪ್ಪ ಸರ್ಕಲ್, ಮಾಧವಾಚಾರ್ ಸರ್ಕಲ್ ಸೇರಿದಂತೆ ವಿವಿಧ ವೃತ್ತಗಳ ಅಗಲೀಕರಣ ಮಾಡಲಾಗುತ್ತದೆ. ಚನ್ನಗಿರಿ ರಸ್ತೆಯ ಅಗಲೀಕರಣ ಕಾರ್ಯವು ನಡೆಯಲಿದೆ. ಇದರ ಜೊತೆಗೆ ಇನ್ನಷ್ಟು ರಸ್ತೆ, ಸರ್ಕಲ್ ಗಳ ಅಗಲೀಕರಣ ಮಾಡಿ, ಅಭಿವೃದ್ಧಿಪಡಿಸಲಾಗುತ್ತದೆ ಎಂದು ತಿಳಿಸಿದರು.
ವರ್ಷಕ್ಕೂ ಮೊದಲೆ ಒಳ ಚರಂಡಿ ಪೂರ್ಣ
ವಿಜಯನಗರ ಸೇರಿದಂತೆ ಪಟ್ಟಣದ ಐದು ಕಡೆಯಲ್ಲಿ ಒಳಚರಂಡಿ ಕಾಮಗಾರಿ ಪೂರ್ಣಗೊಂಡಿದೆ. 2022ಕ್ಕೆ ಕಾಮಗಾರಿ ಮುಗಿಯಬೇಕಿತ್ತು. ಅದರೆ ಒಂದು ವರ್ಷ ಮೊದಲೆ ಕಾಮಗಾರಿ ಪೂರ್ಣವಾಗಿದೆ. ಇದರ ಜೊತೆ 7.2 ಎಂಎಲ್‍ಡಿ ಸಾಮರ್ಥ್ಯದ ಎಸ್‍ಟಿಪಿ ಘಟಕ ನಿರ್ಮಿಸಲಾಗಿದೆ. ಶೀಘ್ರದಲ್ಲೇ ಇವುಗಳನ್ನು ಉದ್ಘಾಟಿಸಲಾಗುತ್ತದೆ ಎಂದು ಆಯುಕ್ತ ಮನೋಹರ್ ತಿಳಿಸಿದರು.
ಸಾರ್ವಜನಿಕ ಸಲಹೆ ಸ್ವೀಕಾರ
ಇದಕ್ಕೂ ಮೊದಲು ಆಯವ್ಯಯ ಸಂಬಂಧ ಸಾರ್ವಜನಿಕರಿಂದ ಸಲಹೆ ಸ್ವೀಕರಿಸಲಾಯಿತು. ಬಸವೇಶ್ವರ ಸರ್ಕಲ್‍ನಲ್ಲಿ ಸಂಜೆ ವೇಳೆ ತಿಂಡಿ ತಿನಿಸು ಗಾಡಿಗಳಿಂದಾಗಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿರುವ ಕುರಿತು ಸಭೆಯಲ್ಲಿದ್ದವರೊಬ್ಬರು ಗಮನ ಸೆಳೆದರು. ನಗರ ಸಭೆ ಆಸ್ತಿ ಖಾಸಗಿ ವ್ಯಕ್ತಿಗಳ ಪಾಲಾಗದಂತೆ ತಡೆಯುವಂತೆ ಒಬ್ಬರು ಮನವಿ ಮಾಡಿದರು. ನಗರದ ವಿವಿಧೆಡೆ ಅನಗತ್ಯವಾಗಿ ಹೈಮಾಸ್ಕ್ ದೀಪಗಳನ್ನು ಅಳವಡಿಸಲಾಗಿದ್ದು, ಈ ಪರಿಪಾಠ ಮುಂದುವರೆಸದಂತೆ ಮನವಿ ಮಾಡಲಾಯಿತು.
ಭದ್ರಾವತಿಯ ವಿವಿಧ ಸಂಘಟನೆಗಳ ಮುಖಂಡರು, ನಗರಸಭೆಯ ವಿವಿಧ ವಿಭಾಗಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422