ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 04 FEBRUARY 2021
ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 315 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆದಿದ್ದಾರೆ.
ಶಿಕಾರಿಪುರದ ಚಿಕ್ಕಮಾಗಡಿ ತಾಂಡ ಸಮೀಪದ ಜವಳಕಟ್ಟೆ ಕೆರೆ ಮತ್ತು ಕರೇಕಟ್ಟೆ ಕೆರೆಯ ದಡದಲ್ಲಿ ಕಳ್ಳಭಟ್ಟಿ ತಯಾರಿ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ಎರಡು ಕಡೆ ದಾಳಿ ನಡೆಸಿದ್ದರು.
ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಕೆರೆ ದಂಡೆಯಲ್ಲಿ ಬಿಂದಿಗೆಗಳಲ್ಲಿ ಬೆಲ್ಲದ ಕೊಳೆಯನ್ನು ಸಂಗ್ರಹಿಸಿ ಇರಿಸಲಾಗಿತ್ತು. 315 ಲೀಟರ್ ಬೆಲ್ಲದ ಕೊಳೆ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ. ಕಳ್ಳಭಟ್ಟಿ ಪತ್ತೆ ಸಂಬಂಧ ಎರಡು ಪ್ರಕರಣ ದಾಖಲಾಗಿದೆಎಂದು ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ತಿಳಿಸಿದ್ದಾರೆ.
ಇನ್ನು, ಚಿಕ್ಕಮಾಗಡಿ ಗ್ರಾಮದಲ್ಲಿ ಕಳ್ಳಭಟ್ಟಿ ದಂಧೆ ಮತ್ತು ಅಪಾಯದ ಕುರಿತು ಚಿಕ್ಕಮಾಗಡಿ ಗ್ರಾಮದಲ್ಲಿ ಜಾಗೃತಿ ಮೂಡಿಸಲಾಯಿತು. ಕಳ್ಳಭಟ್ಟಿ ತಯಾರಿಸುವವರ ಬಗ್ಗೆ ಅಬಕಾರಿ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದರು.
ಅಬಕಾರಿ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ಅವರ ಮುಂದಾಳತ್ವದಲ್ಲಿ ದಾಳಿ ನಡೆಸಲಾಗಿತ್ತು. ಶಿವಮೊಗ್ಗದ ಜಿಲ್ಲೆಯ ಅಬಕಾರಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ದಾಳಿಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















