ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021
ಅಪರಾಧ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಖಡಕ್ ವರ್ನಿಂಗ್ ನೀಡಲು ಶಿವಮೊಗ್ಗ ಪೊಲೀಸರು ರೌಡಿ ಪರೇಡ್ ನಡೆಸಿದರು. 170ಕ್ಕೂ ಹೆಚ್ಚು ರೌಡಿಗಳು ಪರೇಡ್‍ನಲ್ಲಿದ್ದರು.
ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಖಡಕ್ ವಾರ್ನಿಂಗ್ ಕೊಟ್ಟ ಎಸ್‍ಪಿ
ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ರೌಡಿಗಳ ಕೇಸ್‍ಗಳ ಮಾಹಿತಿ ಪಡೆದು, ಚಟುವಟಿಕೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಯಾವುದೆ ರೀತಿಯ ರೌಡಿ ಚಟವಟಿಕೆ ನಡೆಸದಂತೆ ವಾರ್ನಿಂಗ್ ಕೊಟ್ಟರು.
ಬಾರ್, ಟೀ ಅಂಗಡಿ ಮುಂದೆ ನಿಲ್ಲಂಗಿಲ್ಲ
ಬಾರ್ ಒಂದರಲ್ಲಿ ಇತ್ತೀಚೆಗೆ ಗಲಾಟೆಯಾಗಿ, ಯುವಕನೊಬ್ಬನ ಹತ್ಯೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾರ್‍ಗಳಲ್ಲಿ ಕುಡಿದು ಕಿರಿಕ್ ಮಾಡುವ ರೌಡಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಎಚ್ಚರಿಕೆ ನೀಡಿದರು. ಟೀ ಅಂಗಡಿ ಮುಂದೆ ಗುಂಪುಗೂಡಿ ಗಲಾಟೆ ಮಾಡುವುದು ಸೇರಿದಂತೆ ಶಾಂತಿ ಕದಡುವವರ ವಿರುದ್ಧ ಕೇಸ್ ದಾಖಲಿಸಲಾಗುತ್ತದೆ ಎಂದರು. ಇನ್ಮುಂದೆ ಟೀ ಅಂಗಡಿಗಳ ಮುಂದೆ ಸಿಸಿಟಿವಿ ಅಳವಡಿಸಬೇಕು. ಈ ಸಂಬಂಧ ಪೊಲೀಸ್ ಸಿಬ್ಬಂದಿಗಳು ಟೀ ಅಂಗಡಿ ಮಾಲೀಕರ ಮನವೊಸಲಿಸಬೇಕು ಎಂದರು.
ಶಿವಮೊಗ್ಗ ಉಪ ವಿಭಾಗದ ದೊಡ್ಡಪೇಟೆ, ಕೋಟೆ, ಜಯನಗರ , ವಿನೋಬನಗರ, ಶಿವಮೊಗ್ಗ ಗ್ರಾಮಾಂತರ, ತುಂಗಾ ನಗರ, ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳು ಪರೇಡ್‍ನಲ್ಲಿದ್ದರು.
VIDEO REPORT
ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಡಿವೈಎಸ್‍ಪಿ ಉಮೇಶ್ ನಾಯ್ಕ್ ಸೇರಿದಂತೆ ಇನ್ಸ್‍ಪೆಕ್ಟರ್‍ಗಳು, ಸಬ್ ಇನ್ಸ್‍ಪೆಕ್ಟರ್‍ಗಳು ಸೇರಿದಂತೆ ವಿವಿಧ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200