SHIMOGA | 116 ಕೋಟಿಯ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಸಿಕ್ತು ಚಾಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 FEBRUARY 2021

ಶಿವಮೊಗ್ಗದ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ರೈಲ್ವೆ ಸಚಿವ ಪಿಯುಷ್ ಗೋಯಲ್ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ಶಿವಮೊಗ್ಗ ರೈಲ್ವೆ ನಿಲ್ದಾಣ ಮುಂಭಾಗ ಆಯೋಜಿಸಿದ್ದ  ಕಾರ್ಯಕ್ರಮದಲ್ಲಿ, ಕಡದಕಟ್ಟೆ, ಸೋಮಿನಕೊಪ್ಪ ರೈಲ್ವೆ ಮೇಲ್ಸೇತುವೆಗಳು, ಸವಳಂಗ ರಸ್ತೆಯ ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು.

ಡಬಲ್ ಅಲ್ಲ, ಈಗ ಮೂರು ಎಂಜಿನ್

ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ರಾಘವೇಂದ್ರ ಅವರು ಕರ್ನಾಟಕದ ಅಭಿವೃದ್ಧಿಗೆ ಡಬಲ್ ಎಂಜಿನ್‍ಗಳಂತೆ. ಕೇಂದ್ರ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಹಾಗಾಗಿ ರಾಜ್ಯಕ್ಕೆ ಮೂರನೆ ಎಂಜಿನ್ ಸಿಕ್ಕಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್ ಹೇಳಿದರು.

ಮೂರು ಮೇಲ್ಸೇತುವೆಗಳು 18 ರಿಂದ 20 ತಿಂಗಳಲ್ಲಿ ಮುಕ್ತಾಯವಾಗಬೇಕು ಎಂದು ಸಂಸದ ರಾಘವೇಂದ್ರ ಹೇಳುತ್ತಿದ್ದಾರೆ. ಆದರೆ ಅದಕ್ಕೂ ಮೊದಲೆ ಮೇಲ್ಸೇತುವೆಗಳು ಮುಕ್ತಾಯವಾಗಬೇಕು. ಒಂದು ವೇಳೆ ತಡವಾದರೆ ರಾಘವೇಂದ್ರ ಅವರು ನೇರವಾಗಿ ತಮಗೆ ಕರೆ ಮಾಡಬಹುದು ಎಂದರು. ಶೀಘ್ರದಲ್ಲೇ ತಾಳಗುಪ್ಪ – ಹುಬ್ಬಳ್ಳಿ ನಡುವೆ ರೈಲ್ವೆ ಮಾರ್ಗದ ಸರ್ವೆ ಕಾರ್ಯ ನಡೆಯಲಿದೆ. ಯೋಜನಾ ವರದಿ ಸಿದ್ಧವಾದ ಬಳಿಕ ಮುಖ್ಯಮಂತ್ರಿ ಅವರೊಂದಿಗೆ ಯೋಜನೆ ಕುರಿತು ಚರ್ಚೆ ನಡೆಸುವುದಾಗಿ ತಿಳಿಸಿದರು.

ರೈಲ್ವೆ ಯೋಜನೆಗೆ 683 ಕೋಟಿ

ಶಿವಮೊಗ್ಗದ ಮೂರು ರೈಲ್ವೆ ಮೇಲ್ಸೇತುವೆಗಳ ನಿರ್ಮಾಣ ಕಾರ್ಯದ ಶೇ.50ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತಿದೆ. ಭೂ ಸ್ವಾಧೀನದ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಈ ಮೂರು ಯೋಜನೆಗಾಗಿ 30.50 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ರಾಜ್ಯಾದ್ಯಂತ 46 ಲೆವೆಲ್ ಕ್ರಾಸಿಂಗ್ ಗೇಟ್‍ಗಳನ್ನು ತೆರವುಗೊಳಿಸಿ ರಸ್ತೆ ಮೇಲ್ಸೇತುವೆ ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಈ ಯೋಜನೆಗಳ 683 ಕೋಟಿ ರೂ. ಅನುದಾನ ಒದಗಿಸಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 47 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಸ್ವಾತಂತ್ರ್ಯ ನಂತರ ಶಿವಮೊಗ್ಗ ಜಿಲ್ಲೆಗೆ ಮಂಜೂರಾಗಿರುವ ರೈಲ್ವೆ ಮಾರ್ಗ ಶಿವಮೊಗ್ಗ – ರಾಣೇಬೆನ್ನೂರು ರೈಲ್ವೆ ಮಾರ್ಗ ಎಂದು ತಿಳಿಸಿದರು.

VIDEO REPORT

ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಸಂಗಮೇಶ್ವರ್, ಆರಗ ಜ್ಞಾನೇಂದ್ರ, ಕುಮಾರ್ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಇದ್ದರು.

150944999 1328942764133807 1760569171432304378 n.jpg? nc cat=103&ccb=3& nc sid=8bfeb9& nc ohc=FwYP lnxwmIAX9ZK3qW& nc oc=AQlsuCd boQ9nwBCu1sRhQwHOaqdlXWeMAUOEY6L 21LwHOrUfdJVda614 PhtE7xng20iwK 6vPgnLaT6ZNDP59& nc ht=scontent.fblr4 2

149361627 3604160619679949 4315232697694109004 o.jpg? nc cat=103&ccb=3& nc sid=8bfeb9& nc ohc=Gjawb487RqoAX ndEqE& nc ht=scontent.fblr4 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment