ಯತ್ನಾಳ್ ಹಾವು, ಚೇಳು ಹೇಳಿಕೆಗೆ ಶಿವಮೊಗ್ಗದಲ್ಲಿ ಕಗ್ಗದ ಮೂಲಕ ವಿಜಯೇಂದ್ರ ತಿರುಗೇಟು, ಏನು ಹೇಳಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021

ಹಾವು, ಚೇಳುಗಳು ಯಡಿಯೂರಪ್ಪ ಅವರ ಕುಟುಂಬದಲ್ಲೇ ಇದ್ದಾವೆ ಎಂದು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಮಂಕುತಿಮ್ಮನ ಕಗ್ಗವನ್ನು ಉಲ್ಲೇಖಿಸಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ,  ನಾನು ಹಾವು ಚೇಳು ಅಂತಾ ಉಲ್ಲೇಖ ಮಾಡಿದ್ದು ರಾಜಕೀಯ ವಿರೋಧಿಗಳಿಗೆ. ಡಿವಿಜಿಯವರು ಕಾಯಲು ಮೇಲೊಬ್ಬನಿರುವಾಗ ಕಾಯಕವಿಲ್ಲದವನ ಕೊಂಕು ಮಾತಿಗೆ ಕೊರಗುವುದೇಕೆ ಎಂದು ಹೇಳಿದ್ದಾರೆ. ವೈಯಕ್ತಿಕ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನಿಡುವುದಿಲ್ಲ  ಎಂದು ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿದರು.

ಮಸ್ಕಿ ಜವಾಬ್ದಾರಿ, ಗೆಲುವು ನಿಶ್ಚಿತ

ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭೆ ಕ್ಷೇತ್ರಗಳಿಗೆ ಸದ್ಯದಲ್ಲೇ ಉಪ ಚುನಾವಣೆ ಘೋಷಣೆ ಆಗಲಿದೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ತಮಗೆ ಮಸ್ಕಿ  ಕ್ಷೇತ್ರದ ಜವಾಬ್ದಾರಿ ನೀಡಿದ್ದಾರೆ. ಈ ಹಿಂದೆ ಉಪ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದ ಹಾಗೆ ಈ ಬಾರಿಯೂ ಗೆಲುವು ಸಾಧಿಸಲಿದೆ. ಮತದಾರರು ಯಡಿಯೂರಪ್ಪ ಅವರ ಕೈ ಬಲಪಡಿಸಲಿದ್ದಾರೆ ಎಂದರು.

ಕುಮಾರಸ್ವಾಮಿ ಅವರನ್ನು ಜನ ಮರೆತಿದ್ದರು

ರಾಮ ಮಂದಿರ ನಿಧಿಗೆ ದೇಣಿಗೆ ನೀಡದ ಮನೆಗಳನ್ನು ಗುರುತು ಹಾಕಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ ವಿಜಯೇಂದ್ರ, ಕಳೆದ ಎರಡು ವರ್ಷದಿಂದ ರಾಜ್ಯದ ಜನರು ಕುಮಾರಸ್ವಾಮಿ ಅವರನ್ನು ಮರೆತಿದ್ದರು. ಜನರಿಗೆ ನೆನಪು ಮಾಡಲು ಈ ರೀತಿ ಹೇಳಿಕೆ ನೀಡಿರಬಹುದು. ಅದರೆ ಅವರ ಹೇಳಿಕೆಯನ್ನು ಗಂಭೀರವಾಗಿ ಸ್ವೀಕರಿಸುವುದಿಲ್ಲ ಎಂದರು.

ವರ್ಗಾವಣೆ ವಿಚಾರಕ್ಕೂ ನಂಗೂ ಸಂಬಂಧವಿಲ್ಲ

ಐಎಎಸ್ ಅಧಿಕಾರಿಗಳು ಸೇರಿದಂತೆ ವಿವಿಧ ವರ್ಗಾವಣೆ ಪ್ರಕ್ರಿಯೆಗಳು ಸರ್ಕಾರಕ್ಕೆ ಸಂಬಂಧಿಸಿದ ವಿಚಾರ. ನಾನು ಬಿಜೆಪಿ ಪಕ್ಷದ ಉಪಾಧ್ಯಕ್ಷ. ಹಾಗಾಗಿ ಈ ವಿಚಾರದಲ್ಲಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ವಿಜಯೇಂದ್ರ ತಿಳಿಸಿದರು.

ಮೀಸಲಾತಿ ಬಗ್ಗೆ ತಜ್ಞರ ಜೊತೆ ಚರ್ಚೆ

ನಮ್ಮ ಸರ್ಕಾರ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ, ಬೇಡಿಕೆಗಳ ವಿರುದ್ಧ  ಇಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ. ಈ ಕುರಿತು ತಜ್ಞರ ಜೊತೆ ಸಿಎಂ ಅವರು ಚರ್ಚೆ ನಡೆಸಿ, ಕಾನೂನು ಚೌಕಟ್ಟಿನಲ್ಲಿ  ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ವಿಜಯೇಂದ್ರ ತಿಳಿಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 16, 2021

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

Leave a Comment