
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 FEBRUARY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಪೊಲೀಸರ ಬಂದೂಕು ಮತ್ತೆ ಸದ್ದು ಮಾಡಿದೆ. ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡಿರುವ ರೌಡಿ ಶೀಟರ್‍ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಯಾರಿದು ರೌಡಿ ಶೀಟರ್?
ರೌಡಿ ಶೀಟರ್ ದೀಪು ಅಲಿಯಾಸ್ ಡಿಂಗನ ಕಾಲಿಗೆ ಪೊಲೀಸರು ಫೈರ್ ಮಾಡಿದ್ದಾರೆ. ಪ್ರಕರಣವೊಂದರ ಸಂಬಂಧ ರೌಡಿ ಶೀಟರ್ ದೀಪುನನ್ನು ಬಂಧಿಸಲು ತೆರಳಿದಾಗ, ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಫೈರಿಂಗ್ ಮಾಡಲಾಗಿದೆ.
ಹೇಗಾಯ್ತು ಘಟನೆ?
ಅನುಪಿನಕಟ್ಟೆಯಲ್ಲಿ ರೌಡಿ ಶೀಟರ್ ದೀಪು ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ತುಂಗಾ ನಗರ ಠಾಣೆ ಇನ್ಸ್ ಪೆಕ್ಟರ್ ದೀಪಕ್ ಮತ್ತು ಸಿಬ್ಬಂದಿಗಳು ಆತನನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಹೆಡ್ ಕಾನ್ಸ್ ಟೇಬಲ್ ಅರುಣ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಹಾಗಾಗಿ ಶರಣಾಗುವಂತೆ ಇನ್ಸ್ ಪೆಕ್ಟರ್ ದೀಪಕ್ ಅವರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಇದಕ್ಕೆ ಕ್ಯಾರೆ ಅನ್ನದೆ ಎಸ್ಕೇಪ್ ಆಗಲು ಯತ್ನಿಸಿದಾಗ ರೌಡಿ ಶೀಟರ್ ದೀಪು ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ಯಾರಿದು ದೀಪು ಅಲಿಯಾಸ್ ಡಿಂಗ?
ರೌಡಿ ಶೀಟರ್ ದೀಪು ಅಲಿಯಾಸ್ ಡಿಂಗ, ಕುಖ್ಯಾತ ರೌಡಿ ಬಚ್ಚನ್ ಗ್ಯಾಂಗ್‍ನ ಸದಸ್ಯ. ಹಣಕ್ಕಾಗಿ ಇತ್ತೀಚೆಗೆ ಗ್ಯಾಂಗ್ ಕಟ್ಟಿಕೊಂಡು ಹೋಗಿ, ಟಿಪ್ಪು ನಗರದ ವ್ಯಾಪಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿ, ಸಹೋದರರ ಮೇಲೆ ಹಲ್ಲೆ ಮಾಡಿದ್ದ. ಈ ಪ್ರಕರಣ ಸಂಬಂಧ ರೌಡಿ ಶೀಟರ್ ದೀಪುನನ್ನು ಬಂಧಿಸಲು ತುಂಗಾ ನಗರ ಠಾಣೆ ಪೊಲೀಸರು ತೆರಳಿದ್ದರು.
ರೌಡಿ ಶೀಟರ್ ದೀಪು ಈ ಹಿಂದೆ ರೌಡಿ ಶೀಟರ್ ಲೋಕಿ ಜೊತೆ ಗುರುತಿಸಿಕೊಂಡಿದ್ದ. ಮೆಂಟಲ್ ಸೀನ, ಮೋಟಿ ವೆಂಕಟೇಶ್ ಹತ್ಯೆ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ.
ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಡಿವೈಎಸ್‍ಪಿ ಪ್ರಶಾಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದರು. ಗಾಯಗೊಂಡಿರುವ ಹೆಡ್ ಕಾನ್ಸ್ ಟೇಬಲ್ ಅರುಣ್ ಕುಮಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






