ಕೌನ್ ಬನೇಗಾ ಕರೋಡ್‌ಪತಿ ಹೆಸರಲ್ಲಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚನೆ, ವಂಚಿಸಿದ್ದು ಹೇಗೆ?

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 FEBRUARY 2021 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಕೌನ್ ಬನೇಗಾ ಕರೋಡ್‍ ಪತಿ ಕಂಪನಿಯವರು ಎಂದು ನಂಬಿಸಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೀರ್ಥಹಳ್ಳಿಯ ಅನಂತ ಕುಮಾರ್ ಎಂಬುವವರಿಗೆ ಕರೆ ಮಾಡಿದ ಅಪರಿಚತರು, ಕೆಬಿಸಿ ಕಂಪನಿಯಿಂದ ಲಕ್ಕಿ ಡ್ರಾ ಬಂದಿದೆ ಎಂದು ನಂಬಿಸಿದರು. 25 ಲಕ್ಷ ಲಕ್ಕಿ ಡ್ರಾ ಬಂದಿದೆ. ಹಣ ಬೇಕಿದ್ದರೆ ಕೆಲವು ಚಾರ್ಜ್ ಕಟ್ಟಬೇಕು ಎಂದರು.

ಹಂತ ಹಂತವಾಗಿ ನಾಲ್ಕು ಬಾರಿ, ನಾಲ್ಕು ಬ್ಯಾಂಕ್ ಖಾತೆಗಳಿಗೆ ಒಟ್ಟು 1.43 ಲಕ್ಷ ರೂ. ಹಣ ಹಾಕಿಸಿಕೊಂಡಿದ್ದಾರೆ. ಮೋಸ ಹೋಗಿರುವುದು ಅರಿವಿಗೆ ಬರುತ್ತಿದ್ದಂತೆ ಅನಂತ ಕುಮಾರ್ ಅವರು ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು