ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 21 FEBRUARY 2021
ಬೈಕ್‍ನಿಂದ ಆಗಾಗ ಮಾರಕಾಸ್ತ್ರಗಳನ್ನು ಹೊರತೆಗೆದು, ಒಳಗೆ ಇಡುವುದನ್ನು ಮಾಡುತ್ತ, ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದೆ ದೊಡ್ಡಪೇಟೆ ಠಾಣೆ ಪೊಲೀಸರು, ಯುವಕನನ್ನು ಅರೆಸ್ಟ್ ಮಾಡಿ, ಮಾರಕಾಸ್ತ್ರವನ್ನು ವಶಕ್ಕೆ ಪಡೆದಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆರ್‍ಎಂಎಲ್ ನಗರದ ಶಫೀವುಲ್ಲಾ ಬಂಧಿತ. ಕೆಎಸ್‍ಆರ್‍ಟಿಸಿ ಬಸ್ ಡಿಪೋ ಬಳಿ ಬೈಕ್‍ನಲ್ಲಿ ಮಾರಕಾಸ್ತ್ರ ತಂದಿದ್ದ. ಪದೇ ಪದೇ ಅದನ್ನು ಹೊರಗೆ ತೆಗೆಯುವುದು, ಒಳಗೆ ಇಡುವುದು ಮಾಡುತ್ತಿದ್ದ. ಇದರಿಂದ ಆತಂಕಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಖಚಿತ ಮಾಹಿತಿ ಮೇರೆಗೆ ಡಿವೈಎಸ್‍ಪಿ ಪ್ರಶಾಂತ್ ಮುನ್ನೋಳಿ, ದೊಡ್ಡಪೇಟೆ ಇನ್ಸ್‍ಪೆಕ್ಟರ್ ವಸಂತ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪಿಎಸ್ಐ ಶಂಕರಮೂರ್ತಿ, ಸಿಬ್ಬಂದಿಗಳಾದ ಹೆಚ್.ಶೇಖರ್, ಲಚ್ಚಾನಾಯ್ಕ, ಸುದರ್ಶನ್, ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ 50,220 ರೂ. ನಗದು, ಲಾಂಗು, ಮೊಬೈಲ್, ಬೈಕ್ ವಶಕ್ಕೆ ಪಡೆಯಲಾಗಿದೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]