ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 FEBRUARY 2021
ಭದ್ರಾವತಿಯಲ್ಲಿ ಎರಡು ದೇವಾಲಯಗಳಲ್ಲಿ ಕಳ್ಳತನವಾಗಿದೆ. ದೇವರ ಆಭರಣಗಳು, ಕಾಣಿಕೆಯನ್ನು ಕಳ್ಳರು ಕದ್ದೊಯ್ದಿದ್ದಾರೆ.
ದೇಗುಲ 1 – ಶ್ರೀ ವೀರಾಂಜನೇಯ ದೇವಸ್ಥಾನ
ಬೈಪಾಸ್ ಬಳಿ ಹೊಸಸಿದ್ದಾಪುರ ಮಾರ್ಗದಲ್ಲಿರುವ ಶ್ರೀವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಕಳ್ಳತನವಾಗಿದೆ. ದೇಗುಲದ ಬೀಗ ಮುರಿದು ದೇವರ ಬೆಳ್ಳಿಯ ಮುಖವಾಡ, ಕಂಠೀಹಾರ, ದೇವರ ಬೆಳ್ಳಿ ಹಸ್ತ ಹಾಗೂ ಪೆನ್ ಡ್ರೈವ್ ಕಳ್ಳತನವಾಗಿದೆ. ಫೆಬ್ರವರಿ 21ರ ರಾತ್ರಿ ಘಟನೆ ನಡೆದಿರುವ ಶಂಕೆ ಇದೆ. ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಗುಲ 2 – ಶ್ರೀ ಕಾಳಿಂಗೇಶ್ವರ ದೇವಸ್ಥಾನ
ಬೊಮ್ಮನಕಟ್ಟೆಯಲ್ಲಿರುವ ಶ್ರೀಕಾಳಿಂಗೇಶ್ವರ ದೇವಾಲಯದ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಹತ್ತು ಸಾವಿರ ಮೌಲ್ಯದ ಬಂಗಾರದ ತಾಳಿ ಹಾಗೂ ಹುಂಡಿ ಒಡೆದು ಅದರಲ್ಲಿದ್ದ ಸುಮಾರು 10 ರಿಂದ 15 ಸಾವಿರ ಕಾಣಿಕೆ ಹಣ ಕಳವು ಮಾಡಲಾಗಿದೆ. ಪೇಪರ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






