ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 FEBRUARY 2021

ಪೆಟ್ರೋಲ್, ಡೀಸೆಲ್ , ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಎಸ್‍ಡಿಪಿಐ ಜಿಲ್ಲಾ ಶಾಖೆ ವತಿಯಿಂದ ಮಹಾವೀರ ಸರ್ಕಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾರು, ಆಟೋ, ಬೈಕ್, ಸೈಕಲ್ ತಳ್ಳಿಕೊಂಡು ಹೋಗಿ ಪ್ರತಿಭಟನೆ ನಡೆಸಲಾಯಿತು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದೆ. ಪೆಟ್ರೋಲಿಯಂ ಉತ್ಪನ್ನಗಳ ಬಳಕೆದಾರರಿಗೆ ಇದರ ಲಾಭ ವರ್ಗಾಯಿಸುವ ಬದಲು, ಕೇಂದ್ರ ಸರ್ಕಾರ ಶ್ರೀಮಂತರ ಬೊಕ್ಕಸ ತುಂಬಿಸುವ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತೈಲೋತ್ಪನ್ನಗಳ ಬೆಲೆ ಇಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಎಸ್‍ಡಿಪಿಐ ಸಂಘಟನೆ ಜಿಲ್ಲಾಧ್ಯಕ್ಷ ಸಲೀಂ ಖಾನ್, ಅಲ್ಲಾಭಕ್ಷ್, ಕಲೀಂವುಲ್ಲಾ, ಮುಜೀಬ್, ಇಮ್ರಾನ್, ಆಸೀಫ್, ಸಾದಿಕ್, ಫೈರೋಜ್ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment