ಶಿವಮೊಗ್ಗ ಲೈವ್.ಕಾಂ | SHIMOGA NEWS | 24 FEBRUARY 2021
ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲೆಯ ನಾಗರೀಕರ ಪರವಾಗಿ ನಮ್ಮೊಲುಮೆ ಹೆಸರಿನಲ್ಲಿ ಅಭಿನಂದನೆ ಸಲ್ಲಿಸಲಾಗುತ್ತಿದೆ ಎಂದು ಯಡಿಯೂರಪ್ಪ ಅಭಿನಂದನಾ ಸಮಿತಿ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರುದ್ರೇಗೌಡ ಅವರು, ಫೆಬ್ರವರಿ 28ರಂದು ಸಂಜೆ 6 ಗಂಟೆಗೆ ಶಿವಮೊಗ್ಗದ ಹಳೆ ಜೈಲು ಆವರಣದಲ್ಲಿ ನಮ್ಮೊಲುಮೆ ಕಾರ್ಯಕ್ರಮ ನಡೆಯಲಿದೆ ಎಂದರು.
ಸಂಜೆ ಭಾವಾಭಿನಂದನಾ
ಯಡಿಯೂರಪ್ಪ ಅವರಿಗೆ ಸನ್ಮಾನ ಮುಗಿದ ಬಳಿಕ ಭಾವಾಭಿನಂದನ ಕಾರ್ಯಕ್ರಮ ನಡೆಯಲಿದೆ. ಕಿರುತೆರೆಯ ನಿರೂಪಕಿ ಅನುಶ್ರೀ ಈ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ. ಗಾಯಕರಾದ ವಿಜಯ ಪ್ರಕಾಶ್, ರಾಜೇಶ್ ಕೃಷ್ಣನ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಬಂದವರಿಗೆ ಮಾಸ್ಕ್, ಲಡ್ಡು
ಕಾರ್ಯಕ್ರಮದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಜನ ಭಾಗಿ ಆಗಬಹುದು ಎಂಬ ನಿರೀಕ್ಷೆ ಇದೆ. ಈ ಸಂಖ್ಯೆ ಹೆಚ್ಚಳ ಆಗುವ ಸಾದ್ಯತೆಯು ಇದೆ. ಹಾಗಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗು ಲಡ್ಡು ಮತ್ತು ಮಾಸ್ಕ್ ವಿತರಣೆ ಮಾಡಲಾಗುತ್ತದೆ ಎಂದು ರುದ್ರೇಗೌಡ ತಿಳಿಸಿದರು.
ಮಾರ್ಚ್ 1ರಂದು ಸಂಜೆ 6 ಗಂಟೆಗೆ ಅದೇ ವೇದಿಕೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ವತಿಯಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದರು.
ಅರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್.ಅರುಣ್, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ.ಪುರುಷೋತ್ತಮ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಪ್ರಮುಖರಾದ ಲಕ್ಷ್ಮೀನಾರಾಯಣ ಕಾಶಿ, ಸುಭಾಷ್, ಬಳ್ಳೆಕೆರೆ ಸಂತೋಷ್, ರೈಲ್ವೆ ಸಲಹಾ ಸಮಿತಿ ಸದಸ್ಯ ಮಾಲ್ತೇಶ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು