ರಾಸಲೀಲೆ ಸಿಡಿ ಕೇಸ್, ಶಿವಮೊಗ್ಗದಲ್ಲಿ ರಾಮೇಶ್ ಜಾರಕಿಹೊಳಿ ಫೋಟೊಗೆ ಚಪ್ಪಲಿ ಏಟು, ರಾಜೀನಾಮೆಗೆ ಪಟ್ಟು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅಶ್ಲೀಲ ಸಿಡಿ ಪ್ರಕರಣದಲ್ಲಿ ಭಾಗಿಯಾದ ಆರೋಪ ಕೇಳಿ ಬಂದಿರುವ ಹಿನ್ನೆಲೆ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗೋಪಿ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಕರ್ನಾಟಕ ಭವನದಲ್ಲಿ ರಾಸಲೀಲೆ ನಡೆಸಿದ್ದಾರೆ. ಇದರಿಂದ ರಾಜ್ಯದ ಮಾನವನ್ನು ಹರಾಜು ಹಾಕಿದ್ದಾರೆ. ಹಾಗಾಗಿ ಕೂಡಲೆ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಸಚಿವರ ಫೋಟೊಗೆ ಚಪ್ಪಲಿ ಏಟು

ಪ್ರತಿಭಟನೆ ವೇಳೆ ಸಚಿವ ರಮೇಶ್ ಜಾರಕಿಹೊಳಿ ಭಾವಚಿತ್ರಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಚಪ್ಪಲಿ ಏಟು ಕೊಟ್ಟು, ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ರಾಜೀನಾಮೆ ನೀಡುವಂತೆ ಘೋಷಣೆ ಕೂಗಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‍.ಪಿ.ಗಿರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಉತ್ತರ ಬ್ಲಾಕ್ ಅಧ್ಯಕ್ಷ ಲೋಕೇಶ್, ಪ್ರಮುಖರಾದ ಪ್ರವೀಣ್ ಕುಮಾರ್, ಪುಷ್ಪಕುಮಾರ್, ಸೈಯದ್ ಜಮೀಲ್, ಅರುಣ್ ಕುಮಾರ್, ಕೆ.ಎಲ್.ಪವನ್, ಮಸ್ತಾನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

155184013 1338846829810067 7482934020769054883 n.jpg? nc cat=106&ccb=3& nc sid=8bfeb9& nc ohc=39p3FLXVtV4AX88CNvJ& nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment