ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರೆ, ಪೂರ್ವಭಾವಿ ಸಭೆ, ಏನೆಲ್ಲ ಚರ್ಚೆಯಾಯ್ತು? ನಿರ್ಧಾರವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SORABA NEWS | 6 MARCH 2021

ಚಂದ್ರಗುತ್ತಿ ರೇಣುಕಾಂಬಾ ದೇವಿ ದೇವಾಲಯದ ಕಾರ್ಯಾಲಯದಲ್ಲಿ ಜಾತ್ರೋತ್ಸವದ ಪೂರ್ವಭಾವಿ ಸಭೆ ನಡೆಸಲಾಯಿತು. ಗ್ರಾಮಸ್ಥರು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಜಾತ್ರೆಯ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.

ಏನೆಲ್ಲ ಚರ್ಚೆ ಮಾಡಲಾಯಿತು?

ಚಂದ್ರಗುತ್ತಿ ರೇಣುಕಾಂಬಾ ದೇವಿಗೆ ದೊಡ್ಡ ಸಂಖ್ಯೆಯಲ್ಲಿ ಭಕ್ತರಿದ್ದಾರೆ. ಹೊರ ಜಿಲ್ಲೆಗಳಿಂದಲೂ ಇಲ್ಲಿಗೆ ಭಕ್ತರು ಬರುತ್ತಾರೆ. ಜಾತ್ರೆಯಲ್ಲಿ ಸಾವಿರ ಸಾವಿರ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ.

ಕರೋನ ಇರುವುದರಿಂದ ದೊಡ್ಡ ಸಂಖ್ಯೆಯ ಭಕ್ತರ ನಿಯಂತ್ರಣ ಕಷ್ಟವಾಗಲಿದೆ. ಆದ್ದರಿಂದ ಜಾತ್ರೆ ರದ್ದುಗೊಳಿಸಬೇಕು. ಸರಳವಾಗಿ ಪೂಜಾ ವಿಧಿವಿಧಾನಗಳನ್ನು ಅನುಸರಿಸಲು ಅವಕಾಶ ನೀಡಬೇಕು ಎಂದು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಸಭೆಗೆ ಮನವರಿಕೆ ಮಾಡಿಕೊಟ್ಟರು.

ಜಾತ್ರೆ ಸಂದರ್ಭದಲ್ಲಿ ಭಕ್ತರನ್ನು ನಿಯಂತ್ರಿಸಿದರೆ ಅಮವಾಸ್ಯೆ ಮತ್ತು ಹುಣ್ಣಿಮೆ ಸಂದರ್ಭದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಲಿದೆ. ಆಗಲೂ ಭಕ್ತರ ನಿಯಂತ್ರಣ ಕಷ್ಟವಾಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ತಿಳಿಸಿದರು.

ಡಿಸಿ ಜೊತೆ ವಿಚಾರ ಚರ್ಚೆ

ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಮಹಿತಿ ಪಡೆದ ಸಾಗರ ಉಪ ವಿಭಾಗಾಧಿಕಾರಿ ಡಾ. ಎಲ್.ನಾಗರಾಜ್, ಈ ಸಭೆಯಲ್ಲಿ ಚರ್ಚೆಯಾದ ವಿಚಾರಗಳನ್ನು ಜಿಲ್ಲಾಧಿಕಾರಿ ಅವರಿಗೆ ತಿಳಿಸಲಾಗುತ್ತದೆ. ಆ ಬಳಿಕ ಅಂತಿಮ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದರು.

ಜಾತ್ರೆಗೆ ಸಿದ್ಧತೆ ಜೋರು

ಚಂದ್ರಗುತ್ತಿ ರೇಣುಕಾಂಬಾ ದೇವಿಯ ಜಾತ್ರೋತ್ಸವಕ್ಕೆ ಗ್ರಾಮಸ್ಥರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮಾರ್ಚ್ 19ರಂದು ಜಾತ್ರೆ ಆರಂಭವಾಗಲಿದೆ. ಮಾರ್ಚ್ 21ರಂದು ಹೂವಿನ ರಥ, ಮಾ.22ರಂದು ಮಹಾರಥೋತ್ಸವ ನಡೆಯಲಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment