ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಮಾರ್ಚ್ 2021
ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಸಂಬಂಧ ಕಾಂಗ್ರೆಸ್ ಪಕ್ಷ ಹಸಿ ಸುಳ್ಳನ್ನು ಪ್ರಚಾರ ಮಾಡುತ್ತಿದೆ. ಸದನದಲ್ಲೂ ಇದೆ ಸುಳ್ಳುಗಳನ್ನು ಹೇಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್ ಆರೋಪಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರ್ಮಪ್ರಸಾದ್, ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ನಮ್ಮ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಿಂದೆ ಸುರಗಿತೋಪು ಚೌಡೇಶ್ವರಿ ದೇವಸ್ಥಾನದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದಾಗಲೂ ಸಂಗಮೇಶ್ವರ್ ಅವರು ಸಿಟ್ಟಾಗಿದ್ದರು ಎಂದು ಆರೋಪಿಸಿದರು.
ಹಸಿ ಹಸಿ ಸುಳ್ಳುಗಳು
ಜೈ ಶ್ರೀರಾಮ್, ವಂದೇ ಮಾತರಂ, ಭಾರತ್ ಮಾತಾ ಕೀ ಜೈ ಅನ್ನುವ ಘೋಷಣೆಗಳು ನಮ್ಮಲ್ಲಿ ಉತ್ಸಾಹ ಮೂಡಿಸುತ್ತದೆ. ಅವತ್ತು ಕೂಡ ಜೈ ಶ್ರೀರಾಮ್ ಘೋಷಣೆ ಕೂಗಿದ್ದೆವು. ಆ ಬಳಿಕ ಹಲ್ಲೆ ನಡೆಸಲಾಗಿದೆ ಎಂದು ಧರ್ಮಪ್ರಸಾದ್ ತಿಳಿಸಿದರು.
ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಲಾಯಿತು. ಆಮೇಲೆ ಮ್ಯಾಟ್ ಸುಡಲು ಮುಂದಾಗಿದ್ದರು ಎಂದು ಹೇಳಿಕೆ ತಿರುಚಿದರು. ಒಂದು ವೇಳೆ ಆ ಮ್ಯಾಟ್‌ಗೆ ಬೆಂಕಿ ತಗುಲಿದ್ದರೆ ಕ್ಷಣಮಾತ್ರದಲ್ಲಿ ಬೆಂಕಿ ಹೊತ್ತಿಕೊಂಡಿರುತ್ತಿತ್ತು ಎಂದರು.
ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಬಿಜೆಪಿಯವರು ಭಾಗವಹಿಸಿದ್ದೇಕೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಪ್ರಶ್ನಿಸಿದ್ದಾರೆ. ಆದರೆ ಕ್ರೀಡಕೂಟ ಆಯೋಜಿಸಿದ್ದು ಭದ್ರಾವತಿಯ ಬಿವೈಕೆ ಸ್ಪೋರ್ಟ್ಸ್ ಕ್ಲಬ್. ಇದು ಪ್ರತಿ ವರ್ಷ ನಡೆಯುವ ಸ್ಪರ್ಧೆ. ಇದಕ್ಕೂ ಕಾಂಗ್ರೆಸ್‌ಗು ಸಂಬಂಧ ಇಲ್ಲ ಎಂದು ತಿಳಿಸಿದರು.
ಕಬಡ್ಡಿ ಪಂದ್ಯಾವಳಿ ನಡೆದ ಸ್ಥಳದಲ್ಲಿ ಮೊದಲು ಗಲಾಟೆ ಮಾಡಿದರು. ಬಳಿಕ ಆಸ್ಪತ್ರೆಗೆ ಬಂದು ನಮ್ಮವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಧರ್ಮಪ್ರಸಾದ್ ಆರೋಪಿಸಿದರು. ಈ ಸಂಬಂಧ ರೆಕಾರ್ಡ್ ಆಗಿರುವ ವಿಡಿಯೋಗಳನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದರು.
ಪ್ರಮುಖರಾದ ಮಂಗೋಟೆ ರುದ್ರೇಶ್, ಬಿ.ಕೆ.ಶ್ರೀನಾಥ್, ಶಿವರಾಜ್, ಆನಂದ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






