ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021
ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯಿತಿಗೆ ಶಿವಮೊಗ್ಗದ ಸೈನ್ಸ್ ಮೈದಾನ ಸಜ್ಜಾಗಿದೆ. ಸಮಾವೇಶದ ಅಂತಿಮ ಹಂತದ ಸಿದ್ಧತೆಗಳು ಆರಂಭವಾಗಿವೆ.
ಸೈನ್ಸ್ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ವೇದಿಕೆ ಮುಂಭಾಗದ ಸಭೀಕರಿಗಾಗಿ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಮುಖರಾದ ಕೆ.ಟಿ.ಗಂಗಾಧರ್, ಎಂ.ಶ್ರೀಕಾಂತ್, ಕೆ.ಎಲ್.ಅಶೋಕ್ ಸೇರಿದಂತೆ ಹಲವರು ಅಂತಿಮ ಸಿದ್ಧತೆಯ ಪರಿಶೀಲನೆ ನಡೆಸಿದರು.
ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದ ನೇತೃತ್ವ ವಹಿಸಿರುವ ರಾಕೇಶ್ ಟಿಕಾಯತ್, ಡಾ. ದರ್ಶನ್ ಪಾಲ್, ಯುದ್ದವೀರ್ ಸಿಂಗ್ ಅವರು ಶಿವಮೊಗ್ಗದ ರೈತ ಮಹಾ ಪಂಚಾಯತ್ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಇದೆ ಕಾರಣದೊಂದಿಗೆ ಶಿವಮೊಗ್ಗದಲ್ಲಿಯೂ ಹೋರಾಟ ನಡೆಯುತ್ತಿದೆ. ರೈತರಲ್ಲಿ ಜಾಗೃತಿ ಮೂಡಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ರೈತ ಮುಖಂಡ ಕೆ.ಟಿ.ಗಂಗಾಧರ್ ತಿಳಿಸಿದರು.
ಇನ್ನು, ರೈತ ಮಹಾ ಪಂಚಾಯತ್ ಸಾಮಾವೇಶದಲ್ಲಿ ಪಾಲ್ಗೊಳ್ಳುವವರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸಬೇಕು. ಸ್ಯಾನಿಟೈಸ್ ಮಾಡಿಕೊಳ್ಳುವುದು ಕೂಡ ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.
ಮತ್ತೊಂದೆಡೆ ಸಮಾವೇಶಕ್ಕೆ ಬರುವವರಿಗೆ ದಾನಿಗಳು ಕುಡಿಯುವ ನೀರು, ಮಜ್ಜಿಗೆ ಮತ್ತು ಕಲ್ಲಂಗಡಿ ನೀಡಲು ಮುಂದಾಗಿದ್ದಾರೆ. ಬಿಸಿಲ ಝಳ ಇರುವುದರಿಂದ ರೈತರಿಗೆ ಹಣ್ಣು, ದಾಹ ಇಂಗಿಸಿಕೊಳ್ಳಲು ನೀರು, ಮಜ್ಜಿಗೆ ನೀಡುತ್ತಿರುವುದಾಗಿ ರೈತ ಮುಖಂಡ ಕೆ.ಟಿ.ಗಂಗಾಧರ್ ತಿಳಿಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422