ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 MARCH 2021
ಗ್ರಾಮಸ್ಥರೊಂದಿಗೆ ಚರ್ಚೆ ಮಾಡದೆ, ವಾರ್ಡ್‍ವಾರು ಸಭೆ ನಡೆಸದೆ ಗ್ರಾಮಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರಿಸಲಾಗಿದೆ ಎಂದು ಆರೋಪಿಸಿ ಎಮ್ಮೆಹಟ್ಟಿ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಿಮ್ಮೂರ ಸುದ್ದಿಗೆ ನೀವೇ ರಿಪೋರ್ಟರ್, ಶಿವಮೊಗ್ಗ ಜಿಲ್ಲೆಯ ಹಳ್ಳಿ ಹಳ್ಳಿ ಸುದ್ದಿನೂ ಇಲ್ಲಿ ಬರುತ್ತೆ, ಹೇಗದು?
ಎಮ್ಮೆಹಟ್ಟಿ ಗ್ರಾಮ ಪಂಚಾಯಿತಿಯನ್ನು ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಗೆ ಸೇರಿಸಲಾಗಿದೆ. ಗ್ರಾಮಸ್ಥರೊಂದಿಗೆ ಚರ್ಚೆ ನಡೆಸದೆ ಅಧಿಕಾರಿಗಳು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.
ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಿಂದ ಎಮ್ಮೆಹಟ್ಟಿ ಗ್ರಾಮವು ಸುಮಾರು ನಾಲ್ಕೂವರೆ ಕಿ.ಮೀ ದೂರದಲ್ಲಿದೆ. ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ಹೊಳೆಭೈರನಹಳ್ಳಿ, ಮೂಡಲ ವಿಠಲಾಪುರ ಗ್ರಾಮಗಳು ಈ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರಲಿವೆ. ಇಲ್ಲಿರುವ ಬಹುತೇಕರು ಕೃಷಿಕರಾಗಿದ್ದು, ನರೇಗಾ ಯೋಜನೆ ಅಡಿಯಲ್ಲಿ ಗ್ರಾಮಕ್ಕೆ ಹಲವು ಸೌಲಭ್ಯ ಲಭಿಸಿವೆ. ಪಟ್ಟಣ ಪಂಚಾಯಿತಿಗೆ ಸೇರಿಸಿದರೆ ಈ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ ಎಂದು ಗ್ರಾಮಸ್ಥರು ಆರೋಪಿಸಿದರು.
ತಮ್ಮ ಮನವಿಯನ್ನು ಪುರಸ್ಕರಿಸಿ, ಬೇಡಿಕೆ ಈಡೇರಿಸದೆ ಇದ್ದರೆ ಅಹೋರಾತ್ರಿ ಹೋರಾಟ ನಡೆಸಲಾಗುತ್ತದೆ ಎಂದು ಆರೋಪಿಸಿದರು.
ವಿಡಿಯೋ, ಮಾಹಿತಿ : ಅನಿಲ್, ಎಮ್ಮೆಹಟ್ಟಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]