ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021
ನೆಹರೂ ಸ್ಟೇಡಿಯಂನಲ್ಲಿ ಚಕ್ರವರ್ತಿ ಸೂಲೆಬೆಲೆ ಅವರ ಕಾರ್ಯಕ್ರಮಕ್ಕೆ ಅವಕಾಶ ನೀಡಿದರೆ, ಜಿಲ್ಲಾಡಳಿತದ ವಿರುದ್ಧ ಖಾಸಗಿ ದೂರು ಸಲ್ಲಿಸುತ್ತೇವೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಮುಖ ಕೆ.ಪಿ.ಶ್ರೀಪಾಲ್ ಎಚ್ಚರಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನು ಓದಿ | ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ವಿರೋಧ
ಕೃಷಿ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಕೀಲ ಕೆ.ಪಿ.ಶ್ರೀಪಾಲ್, ರೈತ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಅನುಮತಿ ಕೇಳಿದಾಗ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡಾ ಚಟುವಟಿಕೆಗೆ ಮಾತ್ರ ನೆಹರೂ ಸ್ಟೇಡಿಯಂನಲ್ಲಿ ಅವಕಾಶ. ರಾಜಕೀಯ ಕಾರ್ಯಕ್ರಮಗಳಿಗೆ ಅಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು ಎಂದರು.
ಚಕ್ರವರ್ತಿ ಸೂಲಿಬೆಲೆ ಅವರು ಭರತನಾಟ್ಯ ಆಡಲು, ಹಾಡು ಹೇಳಲು ಬರುತ್ತಿದ್ದಾರಾ ಎಂದು ಪ್ರಶ್ನಿಸಿದ ಕೆ.ಪಿ.ಶ್ರೀಪಾಲ್, ಬಿಜೆಪಿ ಸರ್ಕಾರ ಸಣ್ಣತನ ಪ್ರದರ್ಶಿಸುತ್ತಿದೆ. ಚಕ್ರವರ್ತಿ ಸೂಲಿಬೆಲೆ ಅವರ ಕಾರ್ಯಕ್ರಮಕ್ಕೆ ನೆಹರೂ ಸ್ಟೇಡಿಯಂನಲ್ಲಿ ಅವಕಾಶ ನೀಡಿದರೆ ಪಿಸಿಆರ್ ಪೈಲ್ ಮಾಡುತ್ತೇವೆ ಎಂದು ಎಚ್ಚರಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]