ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MARCH 2021
ಕರೋನ ಎರಡನೇ ಅಲೆ ಭೀತಿಯ ಹಿನ್ನೆಲೆ, ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಬಿಗಿ ಕ್ರಮ ಕೈಗೊಂಡಿದೆ. ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೆ ಸೇರಿದಂತೆ ಇತರೆ ಹಬ್ಬಗಳಲ್ಲಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.
ಸಮಾರಂಭಗಳು, ಆಚರಣೆಗಳು ಮತ್ತು ಸಾರ್ವಜನಿಕರು ಗುಂಪು ಸೇರಬಹುದಾದ ಇತರೆ ಚಟುವಟಿಕೆಗೆ ಅವಕಾಶವಿಲ್ಲ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಎಚ್ಚರಿಕೆ ನೀಡಿದ್ದಾರೆ.
ಆದೇಶ ಉಲ್ಲಂಘಿಸುವ ವ್ಯಕ್ತಿ ಅಥವಾ ಸಂಘ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಾಹಣ ಕಾಯ್ದೆ-2005, ಐ.ಪಿ.ಸಿ.ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020ರ ಭಾಗ (4) (5)&(10) ಅನುಗುಣವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422